Home ರಾಜ್ಯ ಕೊರೋನಾ ಬಗ್ಗೆ ಜಾಗೃತಿವಹಿಸಿ : ಈಶ್ವರಪ್ಪ ಮನವಿ

ಕೊರೋನಾ ಬಗ್ಗೆ ಜಾಗೃತಿವಹಿಸಿ : ಈಶ್ವರಪ್ಪ ಮನವಿ

ಶಿವಮೊಗ್ಗ : ಜಿಲ್ಲೆಯಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಈ ಬಗ್ಗೆ ಜಿಲ್ಲೆಯ ಜನರು ಹೆಚ್ಚು ಜಾಗೃತರಾಗಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲೆಯ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ, ಕೊರೋನಾ ಸೋಂಕು ಹೆಚ್ಚಾಗದಂತೆ, ತಡೆಯುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೂ ಕೂಡ, ಸೋಂಕು ಹೆಚ್ಚಾಗುತ್ತಿರುವುದು ಗಂಭೀರವಾದ ವಿಚಾರವಾಗಿದೆ. ಇದನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕಿದೆ. ಎಷ್ಟು ಸಾಧ್ಯವೋ ಅಷ್ಟು ಜಾಗೃತಿ ವಹಿಸಬೇಕಿದೆ. ಮಾಸ್ಕ್ ಮತ್ತು ಸ್ಯಾನಿಟೈಸರ್ ಉಪಯೋಗಿಸಿ ಜಾಗೃತಿ ವಹಿಸಬೇಕಿದೆ. ಈಗಾಗಲೇ, ಜಿಲ್ಲೆಯಲ್ಲಿ, 39,194 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ 32,293 ಜನರಿಗೆ ನೆಗೆಟಿವ್ ಬಂದಿದ್ದು, ಇದು ಕೊಂಚ ಸಮಾಧಾನಕರವಾಗಿದ್ದರೂ ಕೂಡ, ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವಂತಹವರಿಂದಲೂ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಜನರು ಹೆಚ್ಚು ಜಾಗೃತರಾಗುವುದು ಒಳ್ಳೆಯದು ಎಂದಿದ್ದಾರೆ. ನಿನ್ನೆ ಒಂದೇ ದಿನ 262 ಅತಿ ಹೆಚ್ಚು ಪಾಸಿಟಿವ್ ಸೋಂಕಿತರು ಕಂಡು ಬಂದಿದ್ದಾರೆ.

ಹೀಗಾಗಿ, ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವ್ಯವಹರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ, ಮಾಧ್ಯಮಗಳಲ್ಲಿ, ಕೊರೋನಾ ಬಿಟ್ಟರೆ ಬೇರೆ ಯಾವುದೇ ವಿಚಾರವಿಲ್ಲದಂತಾಗಿದೆ. ಜನರು ಟಿ.ವಿ. ನೋಡುವುದನ್ನೇ ಬಿಟ್ಟುಬಿಟ್ಟಿದ್ದಾರೆ. ಕೊರೋನಾ ಸೋಂಕಿತರ ಸಾವಿನ ಬಗ್ಗೆ ತೋರಿಸಲಾಗುತ್ತಿದೆ. ಇದಕ್ಕಿಂತ ಹೆಚ್ಚು ಏನು ಮಾಡಲು ಸಾಧ್ಯ, ಹೀಗಾಗಿ ಜನರೇ ಸದ್ಯದ ಪರಿಸ್ಥಿತಿಗೆ ಹೊಂದಿಕೊಂಡು ಕೊರೋನಾದಿಂದ ದೂರವಿರಬೇಕಾಗಿದೆ ಎಂದು ಈಶ್ವರಪ್ಪ ಮನವಿ ಮಾಡಿಕೊಂಡಿದ್ದಾರೆ.

 ಜಿಲ್ಲೆಯಲ್ಲಿ ಈಗಾಗಲೇ ಕೊವಿಡ್ ವಾರ್ಡ್ ಮತ್ತು ಸೆಂಟರ್​ಗಳು ಸೇರಿದಂತೆ, 2 ಸಾವಿರ ಬೆಡ್ ಗಳ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಡಳಿತದವತಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments