Home ರಾಜ್ಯ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ; ಹೊತ್ತಿ ಉರಿದ  ಬೆಂಗಳೂರಿನ ಕೆ.ಜಿ ಹಳ್ಳಿ , ಡಿ.ಜೆ ಹಳ್ಳಿ..!

ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ; ಹೊತ್ತಿ ಉರಿದ  ಬೆಂಗಳೂರಿನ ಕೆ.ಜಿ ಹಳ್ಳಿ , ಡಿ.ಜೆ ಹಳ್ಳಿ..!

ಬೆಂಗಳೂರು : ವಿವಾದಿತ ಫೇಸ್​ಬುಕ್​ ಪೋಸ್ಟೊಂದು ರಾಜಧಾನಿ ಬೆಂಗಳೂರನ್ನು ಧಗಧಗಿಸುವಂತೆ ಮಾಡಿದೆ. ಕೆ.ಜಿ ಹಳ್ಳಿ ಮತ್ತು ಡಿ.ಜೆಹಳ್ಳಿ ಅಕ್ಷರಶಃ ಹೊತ್ತಿ ಉರಿದಿವೆ. ಪೊಲೀಸ್ ಠಾಣೆ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಂಗಬರ್​ ಅವರ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಹಾಕಲಾಗಿದೆ ಎಂದು ಆರೋಪಿಸಿ 500ಕ್ಕೂ ಹೆಚ್ಚು ಮಂದಿ ಮಂಗಳವಾರ ರಾತ್ರಿ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಭಾಗದಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಹಾಗೂ  ಪೊಲೀಸ್ ಠಾಣೆ ಎದುರೇ ವಾಹನಗಳು ಹೊತ್ತಿ ಉರಿದಿವೆ! ಕಟ್ಟಿಗೆ, ಕಲ್ಲುಗಳನ್ನು ಹಿಡಿದಿದ್ದ ಕಿಡಿಗೇಡಿಗಳು ಪೊಲೀಸ್​ ಹಾಗೂ ಸಾರ್ವಜನಿಕರ ವಾಹನಗಳ ಕಿಟಕಿ ಗಾಜುಗಳನ್ನು ಪುಡಿ ಮಾಡಿ, ಪುಂಡಾಟ ಮೆರೆದರು. ಅಷ್ಟೇ ಅಲ್ಲದೆ ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆಯ ಮೇಲೂ ದಾಳಿ ಮಾಡಿದ ಪುಂಡರು, ವಿದ್ಯುತ್ ದೀಪ ಹಾಗೂ ಗಾಜುಗಳನ್ನು ಒಡೆದಿದ್ದಾರೆ.

ನಡೆದಿದ್ದೇನು? : ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ಎನ್ನಲಾದ ನವೀನ್ ಎಂಬಾತ ತನ್ನ ಫೇಸ್​​ಬುಕ್ ಖಾತೆಯಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದನು.  ಅದನ್ನು ಗಮನಿಸಿದ 500ಕ್ಕೂ ಹೆಚ್ಚು ಮಂದಿ ಆತನನ್ನು ಪ್ರಶ್ನಿಸಲು ಅಖಂಡ ಶ್ರೀನಿವಾಸಮೂರ್ತಿಯವರ ಮನೆ ಬಳಿ ತೆರಳಿದ್ದರು. ಆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಮನೆ ಮೇಲೆ ದಾಳಿ ಮಾಡಿದ್ದಾರೆ. ಬೈಕ್, ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. 

ಅಷ್ಟೇ ಅಲ್ಲದೆ ಡಿ.ಜೆ.ಹಳ್ಳಿ ಹಾಗೂ ಕೆ.ಜೆ ಹಳ್ಳಿ ಪೊಲೀಸ್ ಠಾಣೆಗೆ ಹೋಗಿ, ನವೀನ್ ಬಂಧನಕ್ಕೆ ಒತ್ತಾಯಿಸಿದ್ದರು. ಕೂಡಲೇ ಕ್ರಮಕೈಗೊಳ್ಳುವ ಭರವಸೆಯನ್ನು ಪೊಲೀಸರು ನೀಡಿದ್ದರು. ಆದರೆ, ಆ ವೇಳೆಗೆ ಕಿಡಿಗೇಡಿಗಳು ಪೊಲೀಸ್ ವಾಹನದ ಗಾಜು ಒಡೆದು, ಬೈಕುಗಳನ್ನು ಜಖಂಗೊಳಿಸಿದರು. ಪ್ರಶ್ನಿಸಲು ಬಂದ ಪೊಲೀಸರ ಮೇಲೂ ಕೆಲವರು ಕಲ್ಲುತೂರಾಟ ನಡೆಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಪೊಲೀಸರ ಗುಂಡೇಟಿಗೆ 3 ಮಂದಿ ಮೃತಪಟ್ಟಿದ್ದಾರೆ. ಗಲಾಟೆ ನಡೆದ ಸ್ಥಳಕ್ಕೆ ಪೊಲೀಸ್ ಕಮಿಷನರ್ ಕಮಲ್ ಪಂತ್ ಭೇಟಿ ನೀಡಿದರು. ಎಲ್ಲಾ ವಲಯಗಳ ಡಿಸಿಪಿ ಹಾಗೂ ಎಸಿಪಿಗಳನ್ನು ಕೆ.ಜಿ.ಹಳ್ಳಿ, ಡಿ.ಜಿ ಹಳ್ಳಿ ಠಾಣೆಗೆ ಕರೆಸಿಕೊಂಡು ತುರ್ತು ಸಭೆ ನಡೆಸಿದರು. ಪುಂಡಾಟ ಮೆರೆದವರನ್ನು ಬಂಧಿಸುವಂತೆ ಸೂಚಿಸಿದರು.

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಪರಿಸ್ಥಿತಿ ಹತೋಟಿಗೆ ಬಂದಿದೆ. ಗಲಭೆಗೆ ಸಂಬಂಧಪಟ್ಟಂತೆ 100ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಿದ್ದು, ಸಿಎಂ ಯಡಿಯೂರಪ್ಪನವರಿಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಸದ್ಯ ಖಾಕಿ ಪಡೆ ಸ್ಥಳದಲ್ಲೇ ಬೀಡುಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments