ಬೆಂಗಳೂರು : ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಕೊರೋನಾ ಪಾಸಿಟಿವ್ ಬಂದಿದೆ . ಈ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಹೋಮ್ ಕ್ವಾರೆಂಟೈನ್ಗೆ ಒಳಗಾಗಿದ್ದಾರೆ.
ಭಾಸ್ಕರ್ ರಾವ್ ಅವರ ಕಾರು ಚಾಲಕ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇಂದು ವರದಿ ಬಂದಿದ್ದು, ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದ್ದರಿಂದ ಭಾಸ್ಕರ್ ರಾವ್ ಹೋಮ್ ಕ್ವಾರೆಂಟೈನ್ನಲ್ಲಿರಬೇಕಾಗಿದೆ.
ಕಳೆದ ವಾರ ಸಿಎಂ ಗೃಹಕಚೇರಿ ಕೃಷ್ಣಾ ಸಿಬ್ಬಂದಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಹಾಗಾಗಿ ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಕ್ವಾರೆಂಟೈನ್ನಲ್ಲಿದ್ದಾರೆ.