Home ದೇಶ-ವಿದೇಶ ಪಿಗ್ಗಿ ಫೋಟೋಗೆ ದೀದಿ ಪಿಕ್ ಎಡಿಟ್: ಬಿಜೆಪಿ ಕಾರ್ಯಕರ್ತೆ ಅರೆಸ್ಟ್​..!

ಪಿಗ್ಗಿ ಫೋಟೋಗೆ ದೀದಿ ಪಿಕ್ ಎಡಿಟ್: ಬಿಜೆಪಿ ಕಾರ್ಯಕರ್ತೆ ಅರೆಸ್ಟ್​..!

ಕೊಲ್ಕತ್ತಾ: ಮೆಟ್​ಗಾಲಾ 2019ರ ಕಾರ್ಯಕ್ರಮದಲ್ಲಿ ಎಲ್ಲರಿಗಿಂತ ಹೆಚ್ಚು ಸುದ್ದಿ ಮಾಡಿದ್ದು ಬಾಲಿವುಡ್​ ನಟಿ ಪ್ರಿಯಾಂಕಾ ಚೋಪ್ರಾ. ಪ್ರಿಯಾಂಕ ಅವರ ವಿಭಿನ್ನ ವಿನ್ಯಾಸದ ಉಡುಗೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು. ಹಾಗೇ ಕಳೆದ ಕೆಲವು ದಿನಗಳಿಂದ ಪ್ರಿಯಾಂಕ ಉಡುಗೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯೂ ಮಿಂಚಿದ್ದಾರೆ. ಎಡಿಟೆಡ್​ ಫೋಟೋದಲ್ಲಿ ಕಂಡ ದೀದಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಟ್ರೋಲ್ ಆಗಿದ್ದರು. ಇದೀಗ ಚಿತ್ರವನ್ನು ಎಡಿಟ್ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲಾಗಿದೆ.

ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಪ್ರಿಯಾಂಕಾ ಚೋಪ್ರಾ ಫೋಟೋಗೆ ಮಮತಾ ಬ್ಯಾನರ್ಜಿ ಫೋಟೋ ಎಡಿಟ್‌ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ನಟಿ ಪ್ರಿಯಾಂಕಾ ಫೋಟೋ ಜೊತೆ ಮಮತಾ ಬ್ಯಾನರ್ಜಿ ಫೋಟೋ ಬಳಸಿ ಫೋಟೋ ಶಾಪ್‌ ಮಾಡಿ ಎಡಿಟೆಡ್​ ಫೋಟೋ ಹರಿಬಿಡಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಮಮತಾ ಬ್ಯಾನರ್ಜಿ ಫೋಟೋ ವೈರಲ್ ಆಗ್ತಿದ್ದಂತೆ ಪ್ರಿಯಾಂಕ ಶರ್ಮಾ ಅವರನ್ನು ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments