ತಮಿಳುನಾಡಲ್ಲಿ ಬಿಜೆಪಿ ಜೊತೆ ಕೈ ಜೋಡಿಸಿದ ಎಐಎಡಿಎಂಕೆ

0
242

ಚೆನ್ನೈ: ಬಿಜೆಪಿ ಹಾಗೂ ತಮಿಳುನಾಡಿನ ಆಡಳಿತ ಪಕ್ಷ ಎಐಎಡಿಎಂಕೆ ಜೊತೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳು ಜಂಟಿಯಾಗಿ ಸ್ಪರ್ಧಿಸಲಿವೆ. ಮಂಗಳವಾರ ಮಧ್ಯಾಹ್ನ ನಂತರ ಪಕ್ಷದ ಪ್ರಮುಖರು ಚರ್ಚೆ ನಡೆಸಿದ್ದು, ಮೈತ್ರಿ ಮಾಡಿಕೊಂಡಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಜಂಟಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಮತ್ತು ಎಐಎಡಿಎಂಕೆ ಮಂಗಳವಾರ ಸ್ಪಷ್ಟಪಡಿಸಿದೆ. ಅಷ್ಟೇ ಅಲ್ಲದೆ ಉಪಚುನಾವಣೆಯಲ್ಲಿ 21 ವಿಧಾನಸಭಾ ಕ್ಷೇತ್ರಗಳಿಂದ ಬಿಜೆಪಿ ಮತ್ತು ಎಐಎಡಿಎಂಕೆ ಜಂಟಿಯಾಗಿ ಸ್ಪರ್ಧಿಸಲಿದೆ ಅಂತ ಕೇಂದ್ರ ಸಚಿವ ಪಿಯೂಷ್​ ಗೋಯಲ್​ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳೂ ಜೊತೆಯಾಗಿ ಪ್ರಚಾರ ಕಾರ್ಯ ನಡೆಸಲಿವೆ. ಕೇಂದ್ರ ಸಚಿವರಾದ ಪಿಯೂಷ್​ ಗೋಯಲ್​, ರಾಧಾಕೃಷ್ಣನ್​, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ತಮಿಳಿಸೈ ಸೌಂದರರಾಜನ್ ಸೇರಿ ಬಿಜೆಪಿಯ ಪ್ರಮುಖರು ಮತ್ತು, ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಡಿಸಿಎಂ ಒ ಪನ್ನೀರ್​ಸೆಲ್ವಂ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here