ನವದೆಹಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ಗೆ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂ ದಂಡ ವಿಧಿಸಿ ದೆಹಲಿಯ ತೀಸ್ ಹಜಾರಿ ಕೋರ್ಟ್ ತೀರ್ಪು ನೀಡಿದೆ.
ಅಪರಾಧಿ ಎಂದು ತೀರ್ಪು ನೀಡುತ್ತಿದ್ದಂತೆ ಸೆಂಗರ್ ನ್ಯಾಯಲಯದಲ್ಲಿಯೇ ಕಣ್ಣೀರಿಟ್ಟಿದ್ದಾನೆ. ಸಂತ್ರಸ್ತೆಯ ಮೇಲೆ ಕುಲದೀಪ್ ಅತ್ಯಾಚಾರ ಮಾಡಿರುವುದು ಸಾಬೀತಾಗಿದ್ದು, 25 ಲಕ್ಷ ರೂಪಾಯಿ ದಂಡದಲ್ಲಿ 10 ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಬೇಕೆಂದು ನ್ಯಾಯಧೀಶ ಧರ್ಮೇಶ್ ಶರ್ಮಾ ಆದೇಶಿಸಿದ್ದಾರೆ.