ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.
ಇಂದು ಬೆಳಗ್ಗೆ ಟಿಕೆಟ್ ಕೌಂಟರ್ ಬಳಿ ಲ್ಯಾಪ್ಟಾಪ್ ಬ್ಯಾಗ್ ಪತ್ತೆಯಾಗಿದ್ದು, ಅನುಮಾನ ಬಂದ ಹಿನ್ನೆಲೆ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ತಪಾಸಣೆ ನಡೆಸಿದ್ದಾರೆ. ಅದರಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಸದ್ಯ ಏರ್ಪೋರ್ಟ್ ಬಳಿ ಬಗಿ ಬಂದೋಬಸ್ತ್ ಒದಗಿಸಲಾಗಿದ್ದು, ಪ್ರಯಾಣಿಕರ ತಪಾಸಣೆಯು ನಡೆಯುತ್ತಿದೆ.