Home ರಾಜ್ಯ ಮೆಜೆಸ್ಟಿಕ್ ರೈಲುನಿಲ್ದಾಣದಲ್ಲಿ ಕಂಟ್ರಿಮೇಡ್ ಗ್ರೆನೇಡ್ ಪತ್ತೆ

ಮೆಜೆಸ್ಟಿಕ್ ರೈಲುನಿಲ್ದಾಣದಲ್ಲಿ ಕಂಟ್ರಿಮೇಡ್ ಗ್ರೆನೇಡ್ ಪತ್ತೆ

ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಕಂಟ್ರಿಮೇಡ್ ಗ್ರೆನೇಟ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಉಂಟುಮಾಡಿದೆ.

ಅಪರಿಚಿತ ವ್ಯಕ್ತಿಯೋರ್ವ ಬೆಳಿಗ್ಗೆ 8.30 ಗಂಟೆ ಸುಮಾರಿಗೆ ಕರೆ ಮಾಡಿ ಮೆಜೆಸ್ಟಿಕ್  ರೈಲು ನಿಲ್ದಾಣದ ಪಾಟ್ನಾ ಎಕ್ಸ್​ಪ್ರೆಸ್ ರೈಲಿನಲ್ಲಿ  ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ. ತಕ್ಷಣ ಎಚ್ಚೆತ್ತ ಪೊಲೀಸರು ತಪಾಸಣೆ ಆರಂಭಿಸಿದ್ದಾರೆ, ಅದೇ ಸಮಯದಲ್ಲಿ ಅನುಮಾನಾಸ್ಪದ ವಸ್ತು ಕಂಡುಬಂದಿದ್ದು, ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಮಯದಲದಲ್ಲಿ ಕಂಟ್ರಿಮೇಡ್ ಗ್ರೆನೇಡ್ ಪತ್ತೆಯಾಗಿದೆ.

ಗ್ರೆನೇಡ್ ಪತ್ತೆಯಾದ ಹಿನ್ನಲೆಯಲ್ಲಿ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿ ಭದ್ರತಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಗ್ರೆನೇಡ್  ಅನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದು ರೈಲು ನಿಲ್ದಾಣದ ಸಿಸಿಟಿವಿ ಪರೀಶೀಲನೆ ಮಾಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬೆಂಗಳೂರಿನ ರೈಲ್ವೆ ಎಡಿಜಿಪಿ ಅಲೋಕ್ ಮೋಹನ್  ಸುದ್ದಿಗಾರರ ಜೊತೆ ಮಾತನಾಡಿ, “ಎಲ್ಲಾ ರೈಲಿನ ಬೋಗಿಗಳಲ್ಲಿ ಪರೀಶೀಲನೆ ನಡೆಸಿದ್ದೇವೆ ಸದ್ಯಕ್ಕೆ ಯಾವುದೇ ಅಪಾಯವಿಲ್ಲ.ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ’’.

ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ  ದಳದಿಂದ ಮೆಜೆಸ್ಟಿಕ್ನಲ್ಲಿ ಶೋಧಕಾರ್ಯ ಮುಂದುವರೆದಿದ್ದು, ರೈಲಿನ ವೇಳಾಪಟ್ಟಿಗಳು ವ್ಯತ್ಯಾಸವಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments