Home ದೇಶ-ವಿದೇಶ ಮೋದಿ 2.0 ಸರ್ಕಾರದ ಬಜೆಟ್, ಕೇಂದ್ರದ ಬಜೆಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ

ಮೋದಿ 2.0 ಸರ್ಕಾರದ ಬಜೆಟ್, ಕೇಂದ್ರದ ಬಜೆಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ

ನವದೆಹಲಿ:  ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್​ ಇಂದು ಮಂಡನೆಯಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​  ಬಜೆಟ್​ ಮಂಡಿಸಲಿದ್ದಾರೆ.

ಇಂದು ಬೆಳಗ್ಗೆ  ದೆಹಲಿಯ ನಾರ್ಥ್ ​ಬ್ಲಾಕ್​​ನಲ್ಲಿರುವ ಹಣಕಾಸು ಇಲಾಖೆಯಲ್ಲಿ ನಿರ್ಮಲಾ ಸೀತಾರಾಮನ್​ ಬಜೆಟ್​ ಪೂರ್ವಭಾವಿ ಸಭೆ ನಡೆಸಿದರು.  ಸಭೆ ಮುಕ್ತಾಯದ ಬಳಿಕ  ರಾಷ್ಟ್ರಪತಿಗಳನ್ನು ಭೇಟಿಮಾಡಿ ಬಜೆಟ್ ಮಂಡನೆಗೆ ಅನುಮೋದನೆ ಪಡೆದಿದ್ದಾರೆ. ನಿರ್ಮಲಾ ಸೀತಾರಾಮನ್​ ತಮ್ಮ ಚೊಚ್ಚಲ ಬಜೆಟ್​ ಅನ್ನು ಬೆಳಗ್ಗೆ 11 ಗಂಟೆಗೆ ಸಂಸತ್​ನಲ್ಲಿ ಮಂಡಿಸಲಿದ್ದಾರೆ. ​ ಇಂದಿನ ಬಜೆಟ್​​ನಲ್ಲಿ ಪ್ರಮುಖವಾಗಿ ತೆರಿಗೆ ಇಲಾಖೆ, ದೇಶದ ಆರ್ಥಿಕ ಬೆಳವಣಿಗೆ, ವಿವಿಧ ಕಲ್ಯಾಣ ಯೋಜನೆ, ರೈತರ ಅಭಿವೃದ್ಧಿ, ಉದ್ಯೋಗ, ಬೆಳೆ ವಿಮೆ, ರಕ್ಷಣಾ ವಲಯ ಸೇರಿದಂತೆ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದ್ದು ರಾಷ್ಟ್ರದ ಜನತೆ ಕೇಂದ್ರದ ಬಜೆಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.  

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments