Home ದೇಶ-ವಿದೇಶ 2022ಕ್ಕೆ ರೈತರ ಆದಾಯ ದುಪ್ಪಟ್ಟು: ರಾಮನಾಥ್ ಕೋವಿಂದ್

2022ಕ್ಕೆ ರೈತರ ಆದಾಯ ದುಪ್ಪಟ್ಟು: ರಾಮನಾಥ್ ಕೋವಿಂದ್

ನವದೆಹಲಿ: 2022ರ ಹೊತ್ತಿಗೆ ಕೃಷಿಕರ ಆದಾಯವನ್ನು ದುಪ್ಪಟ್ಟುಗೊಳಿಸಲು ನಮ್ಮ ಸರ್ಕಾರ ಗುರಿ ಇರಿಸಿಕೊಂಡಿದೆ ಅಂತ ರಾಷ್ಟ್ರಪತಿ ರಮನಾಥ್​ ಕೋವಿಂದ್​ ಹೇಳಿದ್ದಾರೆ.

ಫೆಬ್ರವರಿ 1 ರಂದು ಮಧ್ಯಂತರ ಬಜೆಟ್​ ಮಂಡನೆಯಾಗಲಿದ್ದು, ಇಂದಿನಿಂದ ಆರಂಭಿಸಿದಂತೆ ಫೆ. 13ರ ತನಕ ಬಜೆಟ್ ಅಧಿವೇಶನ ನಡೆಯಲಿದೆ. ಅಧಿವೇಶನ ಇಂದು ಆರಂಭವಾಗಿದ್ದು, ರಾಷ್ಟ್ರಪತಿ ರಮನಾಥ್ ಕೋವಿಂದ್​ ಉಭಯಸದನಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

“ದೇಶದ ಆರ್ಥಿಕ ವ್ಯವಸ್ಥೆಯ ತಳಹದಿಯಾಗಿರುವ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸರ್ಕಾರ ಚಿಂತಿಸುತ್ತಿದೆ. 2022ಕ್ಕೆ ಕೃಷಿಕರ ಆದಾಯ ದುಪ್ಪಟ್ಟುಗೊಳಿಸಲು ಗುರಿ ಇರಿಸಿಕೊಳ್ಳಲಾಗಿದೆ. ಈ ಸರ್ಕಾರ ನವ ಭಾರತ ನಿರ್ಮಾಣದ ಗುರಿಯನ್ನು ಹೊಂದಿದೆ. ನವ ಭಾರತದಲ್ಲಿ ಎಲ್ಲರಿಗೂ ಪ್ರಾಥಮಿಕ ಶಿಕ್ಷಣ, ಆರೋಗ್ಯ ಸೇವೆ ಲಭ್ಯವಾಗಬೇಕು, ಯಾರೂ ಹಸಿವಿನಿಂದ ಇರದಂತಹ ಭಾರತ ನಿರ್ಮಾಣವಾಗಲಿದೆ. ಕೇಂದ್ರದ ಯೋಜನೆಗಳು ಜನರಿಗೆ ತಲುಪುತ್ತಿರುವುದು ಸಂತೋಷದ ಸಂಗತಿ. ಬಡ ಜನರಿಗೆ ಅಡುಗೆ ಅನಿಲ, ಸೂರು, ಶಿಕ್ಷಣ ಸೇರಿ ಹಲವು ಸೌಲಭ್ಯಗಳು ಲಭ್ಯವಾಗ್ತಾ ಇದೆ. ಉಜ್ವಲ ಯೋಜನೆಯಡಿಯಲ್ಲಿ 6 ಕೋಟಿ ಹೊಸ ಗ್ಯಾಸ್​ ಕನೆಕ್ಷನ್​ ಒದಗಿಸಲಾಗಿದೆ. ನಮ್ಮ ತಾಯಿ, ಸಹೋದರಿ, ಮಗಳು ಈ ಯೋಜನೆ ಫಲಾನುಭವಿಗಳಾಗಿದ್ದಾರೆ” ಅಂತ ಹೇಳಿದ್ದಾರೆ.

“ಅನಾರೋಗ್ಯದ ಸಂದರ್ಭ ಚಿಕಿತ್ಸೆಗೆ ಹೆಚ್ಚು ಹಣ ಖರ್ಚಾಗುತ್ತಿತ್ತು. ಅದನ್ನು ತಡೆಯಲು ಸರ್ಕಾರ ಆಯುಷ್ಮಾನ್ ಭಾರತ ಯೋಜನೆ ಆರಂಭಿಸಿದೆ. ಈ ಮೂಲಕ ದೇಶಾದ್ಯಂತ 600 ಜಿಲ್ಲೆಗಳಲ್ಲಿ 4,900 ಔಷಧ ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲಿ ಕಡಿಮೆ ಬೆಲೆಯಲ್ಲಿ ಔಷಧ ಒದಗಿಸಲಾಗುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ 1 ಕೋಟಿ ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. 2014ರಲ್ಲಿಯೇ 25 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. 2 ಕೋಟಿ 47 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್​ ಸಂಪರ್ಕ ಒದಗಿಸಲಾಗಿದೆ. ನೋಟ್ ಬ್ಯಾನ್ ನಂತರ 6.8ರಷ್ಟು ಜನ ಐಟಿ ರಿಟನ್ಸ್​ ದಾಖಲಿಸುತ್ತಿದ್ದಾರೆ. ಜನಧನ್ ಯೋಜನೆ ಮೂಲಕ 34 ಕೋಟಿಗೂ ಹೆಚ್ಚು ಜನ ಬ್ಯಾಂಕ್​ ಖಾತೆಗಳನ್ನು ತೆರೆದಿದ್ದಾರೆ. ಮೇಕ್​ ಇನ್​ ಇಂಡಿಯಾ ಯೋಜನೆಯಡಿ ಈಗಾಗಲೇ ಭಾರತ ಮೊಬೈಲ್​ ತಯಾರಿಕೆಯಲ್ಲಿ ಎರಡನೇ ದೊಡ್ಡ ದೇಶವಾಗಿ ಹೊರಹೊಮ್ಮಿದೆ” ಅಂತ ಹೇಳಿದ್ದಾರೆ.

“ಅಧಿವೇಶನ ಸುಲಲಿತವಾಗಿ ನಡೆಯಲು ಎಲ್ಲ ಪಕ್ಷಗಳು ಸಹಾಕರ ನೀಡುವ ಭರವಸೆ ನೀಡಿವೆ. ರಾಷ್ಟ್ರೀಯ ಪ್ರಾಮುಖ್ಯತೆ ಹೊಂದಿರುವ ವಿಚಾರಗಳನ್ನು ಚರ್ಚಿಸಲಾಗುವುದು” ಅಂತ ಬುಧವಾರ ಲೋಕಸಭಾ ಸಭಾಪತಿ ಸುಮಿತ್ರಾ ಮಹಾಜನ್​ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments