ಶಿವಮೊಗ್ಗ : ರಾಜ್ಯದಲ್ಲಿ ಜಾರಿಗೆ ಬರಲಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರೈತರು ಭಯಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಯ ನೀಡಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸಹ ತೀರ್ಮಾನಿಸಲಾಗಿದೆ. ಸರ್ಕಾರ ಎಲ್ಲಾ ಬಗೆಯ ಸಾಧಕ-ಬಾಧಕಗಳ ಚಿಂತನೆ ನಡೆಸಿ, ರೈತರ ಹಿತರಕ್ಷಣೆ ಮುಂದಿಟ್ಟುಕೊಂಡು ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ. ಸ್ವಾಭಿಮಾನಿ ರೈತರ ಹಕ್ಕನ್ನು ಯಾರಿದಂಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ರೈತರ ಅನುಕೂಲಕ್ಕಾಗಿಯೇ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗುತ್ತಿದೆ. ಅನಗತ್ಯ ಗೊಂದಲ ಸಲ್ಲದು. ರೈತರ ಭೂಮಿಯನ್ನು ದರ್ಪದಿಂದ ಪಡೆಯುವ ಹಕ್ಕು ಯಾರಿಗೂ ಇಲ್ಲ ಎಂಬುದು ಕಾಯ್ದೆಯಲ್ಲಿರಲಿದೆ ಎಂದಿದ್ದಾರೆ. ಇನ್ನು ಜಿಲ್ಲೆಯ ಎಂಪಿಎಂ ಕಾರ್ಖಾನೆಯ ಉಳಿವಿಗೆ ನಿರಂತರ ಹೋರಾಟ ನಡೆಯುತ್ತಿದ್ದು, ಕಾರ್ಖಾನೆಯ ಪುನಶ್ವೇತನಕ್ಕೆ ಈಗಾಗಲೇ ಚರ್ಚೆ ನಡೆಸಲಾಗಿದ್ದು, ಸದ್ಯದಲ್ಲಿಯೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ರಾಘವೇಂದ್ರ ಹೇಳಿದ್ದಾರೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on