Home ರಾಜ್ಯ ನಾನೇ ಬೆಡ್ ವ್ಯವಸ್ಥೆ ಕಲ್ಪಿಸುತ್ತೇನೆ : ಬೈರತಿ ಸುರೇಶ್

ನಾನೇ ಬೆಡ್ ವ್ಯವಸ್ಥೆ ಕಲ್ಪಿಸುತ್ತೇನೆ : ಬೈರತಿ ಸುರೇಶ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಭೀಕರವಾಗಿ ಹರಡುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದ ಮತ್ತಷ್ಟು ಭೀಕರತೆ ಹೆಚ್ಚುತ್ತಿದೆ ಎಂದು ಹೆಬ್ಬಾಳ ಶಾಸಕ ಬೈರತಿ ಸುರೇಶ್ ಹೇಳಿದ್ದಾರೆ. ಹೆಬ್ಬಾಳದಲ್ಲಿ ಪ್ರಥಮವಾಗಿ ಕೊವಿಡ್ ಕೇರ್​ ಸೆಂಟರ್​ ಮಾಡಿದ್ದೇವೆ ಹಾಗು ಅದನ್ನು ಸಂಪೂರ್ಣವಾಗಿ ಸಾರ್ವಜನಿಕರಿಗೆ ಮೀಸಲಾಗಿ ಇಟ್ಟಿದ್ದೇವೆ. ಕೊವಿಡ್​ ಸೆಂಟರ್​​ನಲ್ಲಿ ತಕ್ಷಣ ಚಿಕಿತ್ಸೆ ನೀಡಲು ಡಾಕ್ಟರ್, ನರ್ಸ್​​​ಗಳು ಇರ್ತಾರೆ, ಸದ್ಯಕ್ಕೆ 6 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ ಆದರೆ ಆಕ್ಸಿಜನ್ 30 ಬೆಡ್​​ಗಳನ್ನು‌ ವ್ಯವಸ್ಥೆ ಮಾಡಲು ಮಾತನಾಡಿದ್ದೇವೆ.

ಸರ್ಕಾರದಿಂದ ಅನುದಾನ ನೀಡಿಲ್ಲದಿದ್ರೂ ನಾನೇ ಬೆಡ್ ವ್ಯವಸ್ಥೆ ಕಲ್ಪಿಸುತ್ತೇನೆ ನಮಗೆ ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದ್ರೂ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಬೈರತಿ ಸುರೇಶ್ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments