Tuesday, January 25, 2022
Powertv Logo
Homeರಾಜ್ಯ‘ರೂಪ್ಸಾ ಶಾಲೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆಗೆ ಕರೆ’

‘ರೂಪ್ಸಾ ಶಾಲೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆಗೆ ಕರೆ’

ಬೆಂಗಳೂರು: ರೂಪ್ಸಾ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮತ್ತೆ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಇನ್ನೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜನವರಿ 6ರಂದು ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ 8000ಕ್ಕೂ ಹೆಚ್ಚು ಶಿಕ್ಷಕರು ಹಾಗೂ ಸಿಬ್ಬಂದಿ ಒಳಗೊಂಡಂತೆ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಸರ್ಕಾರಕ್ಕೆ ಹಲವು ಬಾರಿ ಅನುದಾನ ರಹಿತ ಶಾಲೆಗಳ ಸಮಸ್ಯೆಗಳನ್ನು ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.  ಜೊತೆಗೆ ಕಳೆದ ತಿಂಗಳಿನಿಂದ ಮಕ್ಕಳ ಆನ್ ಲೈನ್ ಕ್ಲಾಸ್ ಗಳನ್ನ ಬಂದ್ ಮಾಡಿದರೂ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ.  ಇನ್ನೂ ರೂಪ್ಸಾ ಖಾಸಗಿ ಶಾಲೆಗಳ ಅಡಿಯಲ್ಲಿ 20 ಸಾವಿರಕ್ಕೂ ಹೆಚ್ಚು ಶಾಲೆಗಳಿದ್ದು, ಅವುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಪ್ರೊಟೆಸ್ಟ್​ ಮಾಸಲು ನಿರ್ಧರಿಸಲಾಗಿದ್ದು, ತಮ್ಮ 15 ಬೇಡಿಕೆಗಳು ಈಡೇರುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಅಂತಾ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments