Home ರಾಜ್ಯ ಕೊರೋನಾ ಭೀತಿಗೆ ಡೋಂಟ್ ಕೇರ್..! ಸಬ್ ರಿಜಿಸ್ಟ್ರಾರ್ ಕಚೇರಿ ಹೌಸ್ ಫುಲ್

ಕೊರೋನಾ ಭೀತಿಗೆ ಡೋಂಟ್ ಕೇರ್..! ಸಬ್ ರಿಜಿಸ್ಟ್ರಾರ್ ಕಚೇರಿ ಹೌಸ್ ಫುಲ್

ಮೈಸೂರು: ಕೊರೋನಾ ಬಗ್ಗೆ ಸರ್ಕಾರ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಜನ ಡೋಂಟ್ ಕೇರ್ ಅಂತ ನಿರ್ಲಕ್ಷಿಸುತ್ತಿದ್ದಾರೆ. ಒಂದೆಡೆ ಜಿಲ್ಲಾಡಳಿತ ಕೊರೋನಾ ನಿಯಂತ್ರಣಕ್ಕೆ ಹರಸಾಹಸ ನಡೆಸುತ್ತಿದೆ. ಮತ್ತೊಂದೆಡೆ ಸರ್ಕಾರಿ ಕಚೇರಿಗಳಲ್ಲೇ ಕೊರೋನಾ ಮಾರ್ಗಸೂಚಿಗಳನ್ನ ಗಾಳಿಗೆ ತೂರುತ್ತಿದೆ.

ನಂಜನಗೂಡಿನ ಉಪನೊಂದಣಾಧಿಕಾರಿ ಕಚೇರಿ ಇದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಕಚೇರಿಗೆ ಬಂದಿರುವ ಜನರು ಸಾಮಾಜಿಕ ಅಂತರವನ್ನ ಪಾಲಿಸದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ.
ಕೊರೋನಾ ಗೈಡ್ ಲೈನ್ಸ್ ಗಳಿಗೆ ಬೆಲೆಯೇ ಇಲ್ಲದಂತಾಗಿದೆ ಇಲ್ಲಿ. ಉಪನೊಂದಣಾಧಿಕಾರಿ ಕಚೇರಿ
ಜನರಿಂದ ತುಂಬಿಹೋಗಿದೆ.

ಗುಂಪುಗುಂಪಾಗಿ ನಿಂತು ನೊಂದಣಿ ಕಾರ್ಯದಲ್ಲಿ ಮುಳುಗಿದ್ದಾರೆ. ಎಚ್ಚರಿಕೆ ನೀಡಬೇಕಾದ ಸಿಬ್ಬಂದಿಗಳೇ ಮೌನಕ್ಕೆ ಶರಣಾಗಿದ್ದಾರೆ. ಅಧಿಕಾರಿಯ ಸಮ್ಮುಖದಲ್ಲೇ ಕೊರೋನಾ ಮಾರ್ಗಸೂಚಿ ಉಲ್ಲಂಘನೆಯಾಗಿದೆ. ಸ್ಯಾನಿಟೈಸ್ ವ್ಯವಸ್ಥೆಯನ್ನೂ ಅಳವಡಿಸಿಲ್ಲ. ನಂಜನಗೂಡಿನಲ್ಲಿ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಸರ್ಕಾರಿ ಕಚೇರಿಯಲ್ಲೇ ಕೊರೋನಾ ನಿಯಮಾವಳಿಗಳಿಗೆ ಕಿಮ್ಮತ್ತಿಲ್ಲದಂತಾಗಿದೆ. ಇಷ್ಟೆಲ್ಲಾ ನಡೆದರೂ ಅಸಹಾಯಕತೆ ವ್ಯಕ್ತಪಡಿಸುತ್ತಾ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಉಪನೊಂದಣಾಧಿಕಾರಿ ಶಂಕರ ಮೂರ್ತಿ.

ಆರೋಗ್ಯ ಇಲಾಖೆ ಅಧಿಕಾರಿಗಳೇ ಒಮ್ಮೆ ಇತ್ತ ಭೇಟಿ ನೀಡಿ ಪರಿಶೀಲಿಸಬೇಕಿದೆ. ಮುಂದಾಗುವ ಅನಾಹುತ ತಪ್ಪಿಸಬೇಕಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments