Home ರಾಜ್ಯ ಕೊರೋನಾ ನಡುವೆ ಸಿಇಟಿ ಪರೀಕ್ಷೆ ; ಹೇಗಿದೆ ತಯಾರಿ?

ಕೊರೋನಾ ನಡುವೆ ಸಿಇಟಿ ಪರೀಕ್ಷೆ ; ಹೇಗಿದೆ ತಯಾರಿ?

ಬೆಂಗಳೂರು : ಕೊರೋನಾ ನಡುವೆ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯುತ್ತಿದೆ. ಸಿಇಟಿ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್​ ನೀಡಿದ್ದು, ಸಾಕಷ್ಟು ಮುಂಜಾಗೃತ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತೆ. 10ನೇ ತರಗತಿ ಪರೀಕ್ಷೆ ನಡೆದ ಮಾರ್ಗದಲ್ಲಿಯೇ ಸಿಇಟಿ ಕೂಡ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕೊರೋನಾ ಪಾಸಿಟಿವ್ ಇರೋ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದ್ದು, ಅವರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರುತ್ತದೆ. ಅಲ್ಲದೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುತ್ತದೆ. ಕೊವಿಡ್ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರದ ಸಿಬ್ಬಂದಿ ಪಿಪಿಇ ಕಿಟ್ ಕಡ್ಡಾಯಗೊಳಿಸಲಾಗಿದೆ. ಸೀಲ್​ಡೌನ್ ಏರಿಯಾಗಳಿಂದ ಬರಬೇಕು.

ರಾಜ್ಯಾದ್ಯಂತ 1,94,356 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ 30 ಮಂದಿ ವಿದೇಶಿ ವಿದ್ಯಾರ್ಥಿಗಳೂ ಇದ್ದಾರೆ. ರಾಜ್ಯದಲ್ಲಿ 120 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.  ಬೆಂಗಳೂರಲ್ಲಿ 40,200 ಮಂದಿ ಪರೀಕ್ಷೆ ಬರೆಯಲಿದ್ದು, 83 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಬೆಳಗ್ಗೆ 10.30ರಿಂದ 11.50ರವರೆಗೆ, ಮಧ್ಯಾಹ್ನ 2.30ರಿಂದ 3.30ರವರೆಗೆ 2 ಹಂತಗಳಲ್ಲಿ ಪರೀಕ್ಷೆ ನಡೆಯುತ್ತದೆ.  ಇಂದು (ಜುಲೈ 30) ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, ನಾಳೆ (ಜುಲೈ 31) ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ ಆಗಸ್ಟ್ 1ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯುತ್ತದೆ.  

LEAVE A REPLY

Please enter your comment!
Please enter your name here

- Advertisment -

Most Popular

‘ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ’

ರಾಯಬಾಗ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ನಡೆದಿದೆ.  ಬೆಳಗಾವಿ ಜಿಲ್ಲೆ ರಾಯಬಾಗ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದ್ದು,  ವೃದ್ಧ ತಂದೆ, ತಾಯಿ,...

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

‘ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವು’

ಹಾಸನ : ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಅರಕಲಗೂಡು ತಾಲೂಕಿನ ಹಾಸನ-ಕೊಡಗು ಗಡಿ ಭಾಗದ ಬಾಣಾವರ ಗೇಟ್ ನ ಬೆಟ್ಟಗಳಲೆ ಬಳಿ ತಡರಾತ್ರಿ ನಡೆದಿದೆ. ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ...

‘ಇಂದು ವಿಧಾನಮಂಡಲ ಕಲಾಪ ಆರಂಭ’

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಕಲಾಪ ಆರಂಭವಾಗಲಿದ್ದು, ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ, ಇತ್ತೀಚಿನ ಖಾತೆ ಹಂಚಿಕೆ ಗೊಂದಲ, ವಿಧಾನಪರಿಷತ್ ನ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಸೇರಿದಂತೆ...

Recent Comments