Homeರಾಜ್ಯಮನನೊಂದ ಚೈತ್ರಾ ಕೊಟ್ಟೂರು ಆತ್ಮಹತ್ಯೆ ಯತ್ನ

ಮನನೊಂದ ಚೈತ್ರಾ ಕೊಟ್ಟೂರು ಆತ್ಮಹತ್ಯೆ ಯತ್ನ

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೊಟ್ಟೂರು ಆತ್ಮಹತ್ಯೆ ಯತ್ನಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಚೈತ್ರಾ ಆತ್ಮಹತ್ಯೆಗೆ  ಯತ್ನಸಿದ್ದಾರೆ. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಚೈತ್ರ ಕೊಟ್ಟೂರು.

ಮಾ.28 ರಂದು ಬೆಂಗಳೂರಿನ ದೇಗುಲದಲ್ಲಿ ವಿವಾಹವಾಗಿದ್ದ ಚೈತ್ರ ಮದುವೆಯ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.ಮಂಡ್ಯ ಮೂಲದ ಯುವಕನ ಜೊತೆಗೆ ಮದುವೆಯಾಗಿದ್ದ ಚೈತ್ರರವರು ಬಲವಂತವಾಗಿ ತಾಳಿ ಕಟ್ಟಿಸಿಕೊಂಡಿದ್ದಾಳೆಂಬ ಆರೋಪ ಕೇಳಿ ಬಂದಿತ್ತು.

ಪೊಲೀಸ್ ಠಾಣೆಯಲ್ಲಿ ವಿವಾದ ಇತ್ಯರ್ಥ ಆಗದಿದ್ದರಿಂದ ನೊಂದಿದ್ದ ಚೈತ್ರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಪ್ರಾಣಾಪಾಯದಿಂದ ಪಾರಾಗಿರುವ ಚೈತ್ರಾಗೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದರಿಂದ ಕೋಲಾರ ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments