ಚಾಲೆಜಿಂಗ್ ಸ್ಟಾರ್ ದರ್ಶನ್ ಎಂದಿಗೂ ಸಾಮಾಜಿಕ ಕಳಕಳಿಯಂತಹ ಕಾರ್ಯಗಳಿಗೆ ಒಂದು ಹೆಜ್ಜೆ ಮುಂದೆಯೇ ಇರುತ್ತಾರೆ. ಹಾಗೆಯೇ ಲಾಕ್ಡೌನ್ ಆದೇಶ ಬಂದಾಗಿನಿಂದಲೂ ಸಮಸ್ಯೆಯಲ್ಲಿ ಸಿಲುಕಿದವರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಲಾಕ್ಡೌನ್ ಯಶಸ್ವಿಯಾಗುವಂತೆ ನೋಡಿಕೊಳ್ಳಿ ಎಂದೂ ಜನರಲ್ಲಿ ಮನವಿ ಮಾಡಿಕೊಳ್ಳುತ್ತಾ ಬಂದಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ‘ದೀಪ ಹಚ್ಚೋಣ ಬನ್ನಿ‘ ಎಂಬ ಕರೆಗೂ ದರ್ಶನ್ ಬೆಂಬಲ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಮ್ಮ ಪ್ರಧಾನಿಗಳ ಕರೆಯಂತೆ ಕೊರೋನಾ ವೈರಸ್ನಿಂದ ತುಂಬಿರುವ ಅಂಧಕಾರವನ್ನು ಏಪ್ರಿಲ್ 5, ರಾತ್ರಿ 9 ಗಂಟೆಗೆ ನಿಮ್ಮ ಮನೆಯ ಅಂಗಳದಿಂದಲೇ ಮೊಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲೂ ಮೂಡಿಸೋಣ ‘ ಎಂದು ಅಭಿಮಾನಿಗಳಿಗೆ ಕರೆ ಕೊಟ್ಟಿದ್ದಾರೆ.
ಅಷ್ಟೆ ಅಲ್ಲದೆ ಭಾರತೀಯರು ಒಗ್ಗಟ್ಟಿನಿಂದ ಮಾತ್ರ ಈ ಸಂದಿಗ್ಧ ಪರಿಸ್ಥಿತಿಯಿಂದ ಹೊರಬರಲು ಶಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ. ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ ಎಂದು ತಮ್ಮ ಅಭಿಮಾನಿಗಳಿಗೆ ಹೇಳಿದ್ದಾರೆ.
ಎಲ್ಲಾ ಭಾರತೀಯಿರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ, ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ 🙂
— Darshan Thoogudeepa (@dasadarshan) April 4, 2020