Home ರಾಜ್ಯ ಭದ್ರಾ ಅಭಯಾರಣ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ಭದ್ರಾ ಅಭಯಾರಣ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಟ ಚಾಲೆಂಜಿಂಗ್​ ಸ್ಟಾರ್ ದರ್ಶನ್ ಗೆ ವನ್ಯಜೀವಿ ಛಾಯಾಗ್ರಹಣ ಮಾಡುವುದೆಂದರೆ ಅಚ್ಚುಮೆಚ್ಚು. ಇದಕ್ಕಾಗಿ ದೇಶದ ಮತ್ತು ವಿದೇಶದ ನಾನಾ ಸಫಾರಿಗಳಿಗೆ ಈಗಾಗಲೇ ಇವರು ಭೇಟಿ ನೀಡಿದ್ದಾರೆ. ಅದರಂತೆ, ಇಂದು ಮತ್ತೆ ನಾಳೆ ಶಿವಮೊಗ್ಗದ ಬಿ.ಆರ್.ಪಿ. ಜಂಗಲ್ ನಲ್ಲಿ ಸಫಾರಿ ನಡೆಸಲಿದ್ದಾರೆ. ಈ ವೇಳೆ ಕಾಡು ಪ್ರಾಣಿಗಳ ಫೋಟೋಗ್ರಫಿ ಕೂಡ ಇವರು ಮಾಡಲಿದ್ದು, ಇದಕ್ಕಾಗಿ ಇವರು ಸಜ್ಜಾಗಿ ಬಂದಿದ್ದಾರೆ.

ಅಂದಹಾಗೆ, ನಿನ್ನೆ ಶುಕ್ರವಾರ ಸಂಜೆ ಶಿವಮೊಗ್ಗಕ್ಕೆ ಆಗಮಿಸಿರುವ ಅವರು, ಭರ್ತಿಯಾಗುತ್ತಿರುವ ಭದ್ರಾ ಡ್ಯಾಂ ವೀಕ್ಷಿಸಿ, ಆನಂದಿಸಿದ್ದಾರೆ. ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ಡಿ ಬಾಸ್ ದರ್ಶನ್ ಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್ ನೀಡಿದ್ದು, ಅರಣ್ಯ ಇಲಾಖೆಯ ಐಬಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಭದ್ರಾ ಅಭಯಾರಣ್ಯದಲ್ಲಿರುವ ಬ್ರಿಟಿಷರ ಕಾಲದ ಐಬಿಯಲ್ಲಿ ಇಂದು ಮಧ್ಯಾಹ್ನದ ಊಟ ಸವಿಯಲಿದ್ದು, ಸಫಾರಿ ಜೊತೆಗೆ ಫೋಟೋಗ್ರಫಿ ನಡೆಸಲಿದ್ದಾರೆ. ದರ್ಶನ್ ಮತ್ತು ತಂಡ ಎರಡು ದಿನಗಳ ಕಾಲ ಅಭಯಾರಣ್ಯದಲ್ಲಿಯೇ ಉಳಿಯಲಿದ್ದು, ಸಫಾರಿ ಮಜಾ ಮುಗಿಸಿ, ನಾಳೆ  ಸಂಜೆ  ಹಿಂತಿರುಗಲಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments