Home ರಾಜ್ಯ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಡಗರ

ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಡಗರ

ಮೈಸೂರು : ಇಂದು ಆಷಾಢದ ಮೊದಲ ಶುಕ್ರವಾರವಾಗಿರುವುದರಿಂದ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಆರಂಭವಾಗಿದೆ.

ಆಷಾಢ ಶುಕ್ರವಾರ  ದೇವಿಗೆ ವಿಶೇಷವಾಗಿರುವುದರಿಂದ ವಿಭಿನ್ನ ರೀತಿಯ ಪುಷ್ಪಾಲಾಂಕಾರಗಳು ಹಾಗೂ ಪೂಜೆಯನ್ನು ನಡೆಸಲಾಗುತ್ತಿದೆ.  ಇನ್ನು ಭಕ್ತಾಧಿಗಳು ಮುಂಜಾನೆಯೇ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.  ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಬರಲು ಭಕ್ತರಿಗೆ ಲಲಿತ ಮಹಲ್ ಹೆಲಿಪ್ಯಾಡ್‌ನಿಂದ ಉಚಿತ ಬಸ್‌ಗಳ ವ್ಯವಸ್ಥೆ ಮಾಡಿಕೊಡಲಾಗಿದೆ. ಇಂದು ಸಾವಿರಾರು ಭಕ್ತರು ಬರುವುದರಿಂದ ನೂಕು-ನುಗ್ಗಲು ಉಂಟಾಗದಂತೆ ವ್ಯಾಪಕ ಬಿಗಿ ಬಂದೋಬಸ್ತ್,​ ಪೊಲೀಸ್ ಭದ್ರತೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments