Home ಸಿನಿ ಪವರ್ ಚಂದನ್ ಶೆಟ್ಟಿ `ಕೋಲು ಮಂಡೆ’ ವಿಡಿಯೋ ಡಿಲೀಟ್..!

ಚಂದನ್ ಶೆಟ್ಟಿ `ಕೋಲು ಮಂಡೆ’ ವಿಡಿಯೋ ಡಿಲೀಟ್..!

ಬೆಂಗಳೂರು : ರ್ಯಾಪರ್ ಚಂದನ್ ಶೆಟ್ಟಿ ರೀಮಿಕ್ಸ್ ಮಾಡಿದ್ದ ಕೋಲುಮಂಡೆ ಜಂಗಮ ದೇವ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಿಂದ ಡಿಲೀಟ್ ಮಾಡಲಾಗಿದೆ.

ಚಂದನ್ ಶೆಟ್ಟಿ ರೀಮಿಕ್ಸ್ ಮಾಡಿದ್ದ ಈ  ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಗಣೇಶ ಚತುರ್ಥಿಯಂದು ರಿಲೀಸ್ ಆಗಿತ್ತು. ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 3 .5 ಮಿಲಿಯನ್​ಗಿಂತಲೂ ಹೆಚ್ಚಿನ ವೀವ್ಸ್ ಬಂದಿತ್ತು.

ಕೋಲು ಮಂಡೆ ಸಾಂಗ್ ವೈರಲ್ ಆಗ್ತಿದ್ದಂತೆ ರ‍್ಯಾಪರ್ ಚಂದನ್ ಶೆಟ್ಟಿಗೆ ಮಂಡೆ ಬಿಸಿ ಶುರುವಾಗಿದ್ದು,  ಬಿಡುಗಡೆಯಾಗಿರೋ ವಿಡಿಯೋದಲ್ಲಿ ಶರಣೆ ಸಂಕಣ್ಣೆಯನ್ನು ಅಶ್ಲೀಲವಾಗಿ ತೋರಿಸಲಾಗಿದೆ. ತುಂಡುಡುಗೆಯಲ್ಲಿ ತೋರಿಸಿ ಮಾದಪ್ಪನ ಭಕ್ತರ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಅಂತ ಆಕ್ರೋಶ ವ್ಯಕ್ತವಾಗಿತ್ತು. ವಿಡಿಯೋ ಕೂಡಲೇ ಡಿಲೀಟ್ ಮಾಡಬೇಕು ಹಾಗೂ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಮಾದಪ್ಪನ ಭಕ್ತರು  ಆಗ್ರಹಿಸಿದ್ದರು. ವಿಡಿಯೋ ಡಿಲೀಟ್ ಮಾಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದರು.

ಈ ವಿವಾದದ ಬೆನ್ನಲ್ಲೇ ಆನಂದ್ ಆಡಿಯೋ ಚಾನಲ್​ನಲ್ಲಿ ಹಾಡನ್ನು ಡಿಲೀಟ್ ಮಾಡಲಾಗಿದೆ.  ಚಂದನ್ ಶೆಟ್ಟಿ ತಮ್ಮ ಹಾಗೂ ಇಡೀ ತಂಡದ ಪರವಾಗಿ ಮಾದಪ್ಪನ ಭಕ್ತರು ಹಾಗೂ ನಾಡಿನ ಜನತೆಯ ಕ್ಷಮೆಯಾಚಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments