Home ದೇಶ-ವಿದೇಶ 18 ಶಾಸಕರ ಅನರ್ಹತೆ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್..!

18 ಶಾಸಕರ ಅನರ್ಹತೆ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್..!

ಎಐಎಡಿಎಂ​ಕೆಯ 18 ಶಾಸಕರನ್ನು ಅನರ್ಹಗೊಳಿಸಿರೋದನ್ನು ಮದ್ರಾಸ್​ ಹೈಕೋರ್ಟ್​ ಎತ್ತಿಹಿಡಿದಿದೆ. ಇದ್ರಿಂದಾಗಿ ಟಿಟಿವಿ ದಿನಕರನ್​ ಗುಂಪಿಗೆ ಭಾರೀ ಹಿನ್ನಡೆ ಆಗಿದೆ. ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದ ದಿನಕರನ್​ ಬಣದ 18 ಶಾಸಕರು ಆಗಸ್ಟ್​ ತಿಂಗಳಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸರ್ಕಾರದ ಬಗ್ಗೆ ತಮ್ಗೆ ವಿಶ್ವಾಸ ಇಲ್ಲ ಅಂತ ಆರೋಪಿಸಿದ್ರು. ಅಷ್ಟೇ ಅಲ್ದೆ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ರು. ಇದಾದ ಬೆನ್ನಲ್ಲೇ ತಂಗ ತಮಿಳ್​ಸೆಲ್ವ ಸೇರಿ 18 ಬಂಡಾಯ ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಅಷ್ಟೇ ಅಲ್ದೆ, ತಮಿಳುನಾಡು ವಿಧಾನಸಭೆ ಪಕ್ಷಾಂತರ ನಿಷೇಧ ನಿಯಮಾವಳಿ ಅನ್ವಯ ಅವರನ್ನು ಅನರ್ಹಗೊಳಿಸಲಾಗಿದೆ ಅಂತ ಸ್ಪಷ್ಟನೆಯನ್ನೂ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅನರ್ಹ ಶಾಸಕರು ಹೈಕೋರ್ಟ್​​ ಮೆಟ್ಟಿಲೇರಿದ್ರು. ಮೇಲ್ಮನವಿ ವಿಚಾರಣೆ ಮಾಡಿದ ನ್ಯಾ. ಎಂ ಸತ್ಯನಾರಾಯಣ್ ಅವ್ರು ಶಾಸಕರನ್ನು ಅನರ್ಹಗೊಳಿಸಿದ್ದ ತಮಿಳುನಾಡು ಅಸೆಂಬ್ಲಿ ಸ್ಪೀಕರ್ ನಿರ್ಧಾರವನ್ನು ಎತ್ತಿಹಿಡಿದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಹುಣಸೋಡು ಬ್ಲ್ಯಾಸ್ಟ್ ವೇಳೆ ಇದ್ದ ಸ್ಫೋಟಕ ಎಷ್ಟು ಗೊತ್ತಾ…..!?

ಹುಣಸೋಡು ಕ್ರಷರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವರ್ ಟಿವಿ ಗೆ ಮಹತ್ವದ ಸುಳಿವೊಂದು ದೊರೆತಿದೆ. ಪವರ್ ಟಿವಿ ಗೆ ಉನ್ನತ ಮೂಲದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಬ್ಲಾಸ್ಟ್ ಆದ ವಾಹನದಲ್ಲಿ ಎಷ್ಟು...

‘ಘಟನೆಯ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಲಿ ಪ್ರಸನ್ನ್ ಕುಮಾರ್ ಆಗ್ರಹ’

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟಕದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಒಂದು ಲೋಡ್ ಸ್ಪೋಟಕ ವಸ್ತುಗಳು ನಗರಕ್ಕೆ ಬಂದಿದ್ದು ಹೇಗೆ. ನಗರಕ್ಕೆ ಬರುವ...

ಉಸಿರು ಕಟ್ಟಿಸುವ ವಾತಾವರಣವೇ ಪಕ್ಷ ಬಿಡಲು ಕಾರಣ: ರಾಜಣ್ಣ ಕೊರವಿ

ಹುಬ್ಬಳ್ಳಿ: ಜೆಡಿಎಸ್ ಪಕ್ಷದಲ್ಲಿನ ಉಸಿರು ‌ಕಟ್ಟಿಸಿವ ವಾತಾವರಣದಿಂದ ಬೆಸತ್ತು ನಾನು ಹಾಗೂ ನನ್ನ ಬೆಂಬಲಿಗರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಉದ್ದವ್ ಠಾಕ್ರೆ ವಿರುದ್ಧ ಸಿಡಿದೆದ್ದ ಕರವೇ‌ ಕಾರ್ಯಕರ್ತರು’

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಸೇನಾ ವಿರುದ್ದ ಸಿಡಿದೆದ್ದ ಕರವೇ ಯುವಸೇನಾ ಕಾರ್ಯಕರ್ತರು ಕರವೇ...

Recent Comments