Home ಕ್ರೀಡೆ P.Cricket ಡೆಲ್ಲಿ ವಿರುದ್ಧ 'ಕಿಂಗ್ಸ್​' ಸೂಪರ್ ಆಟ ; ಸತತ 2ನೇ ಗೆಲುವು ಪಡೆದ ಧೋನಿ ಪಡೆ..!

ಡೆಲ್ಲಿ ವಿರುದ್ಧ ‘ಕಿಂಗ್ಸ್​’ ಸೂಪರ್ ಆಟ ; ಸತತ 2ನೇ ಗೆಲುವು ಪಡೆದ ಧೋನಿ ಪಡೆ..!

ನವದೆಹಲಿ : ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್​ ತನ್ನ ಗೆಲುವಿನ ಅಭಿಯಾನವನ್ನು ಮುಂದುವರೆಸಿದೆ.
ಫಿರೋಜ್​ ಷಾ ಕೋಟ್ಲಾ ಮೈದಾನದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೇಯಸ್​ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್​ ತನ್ನ ತವರು ಅಂಗಳವಾದರೂ ನೀರಸ ಪ್ರದರ್ಶನ ನೀಡಿತು. ಶಿಖರ್ ಧವನ್ (51) ಹೊರತು ಪಡಿಸಿದ್ರೆ ಯಾವೊಬ್ಬ ಬ್ಯಾಟ್ಸ್​ಮನ್​ ಕೂಡ ನಿರೀಕ್ಷಿತ ಆಟ ಆಡಲಿಲ್ಲ. ನಿಗಧಿತ 20 ಓವರ್​ ಗಳಲ್ಲಿ 6 ವಿಕೆಟ್​ ಕಳೆದುಕೊಂಡು ಕೇವಲ 147 ರನ್​ಗಳನ್ನಷ್ಟೇ ಗಳಿಸಿತು.
ಸುಲಭ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್​ಗೆ ಡೆಲ್ಲಿ ಬೌಲರ್​ಗಳು ಪರದಾಡುವಂತೆ ಮಾಡಿದ್ರು. ಅಂತಿಮ ಓವರ್​ವರೆಗೂ ಡೆಲ್ಲಿ ತಾನು ನೀಡಿದ ಟಾರ್ಗೆಟ್​ ಡಿಫೈನ್ ಮಾಡಿಕೊಂಡಿತು. ಅಂತಿಮವಾಗಿ 19.4 ಓವರ್​ ಗಳಲ್ಲಿ ಧೋನಿ ಪಡೆ ಗೆಲವು ಪಡೆಯಿತು. ಚೆನ್ನೈ ಪರ ಶೇನ್​ ವ್ಯಾಟ್ಸನ್​ 44, ಸುರೇಶ್ ರೈನಾ 30, ಕೇದಾರ್ ಜಾಧವ್​ 27 ಹಾಗೂ ನಾಯಕ ಧೋನಿ ಅಜೇಯ 32ರನ್​ಗಳಿಸಿದರು.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments