ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್​ ಕುಮಾರ್​ ಕಟೀಲ್ ಪದಗ್ರಹಣ

0
286

ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸಂಸದ ನಳಿನ್​ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಇಂದು ನಳಿನ್ ಕುಮಾರ್ ಅವರ ಪದಗ್ರಹಣ ನೆರವೇರಿದ್ದು, ಬಿ.ಎಸ್​ ಯಡಿಯೂರಪ್ಪನವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.
ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಟೀಲ್​ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಬಿಎಸ್​ವೈ ಅಧಿಕಾರ ಹಸ್ತಾಂತರ ಮಾಡಿದರು. ಬೆಳಗ್ಗೆ 9.30ರ ಸುಮಾರಿಗೆ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಂಗಳವಾದ್ಯಗಳೊಂದಿಗೆ ನಳಿನ್​ ಕುಮಾರ್ ಬಿಜೆಪಿ ಕಚೇರಿಗೆ ಆಗಮಿಸಿದ್ರು. ಇನ್ನು ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಸಂಸದರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here