Home ರಾಜ್ಯ ಚಿಕ್ಕಬಳ್ಳಾಪುರ ಬಳಿ ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ 12 ಮಂದಿ ಸಾವು

ಚಿಕ್ಕಬಳ್ಳಾಪುರ ಬಳಿ ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ 12 ಮಂದಿ ಸಾವು

ಚಿಕ್ಕಬಳ್ಳಾಪುರ : ಟಾಟಾ ಏಸ್​ ಹಾಗೂ ಖಾಸಗಿ ಬಸ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಬಳಿಯ ಮುರುಗಮಲ್ಲ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

ಟಾಟಾ ಏಸ್​ ಚಿಂತಾಮಣಿಯಿಂದ ಮುರುಗಮಲ್ಲ ಕಡೆಗೆ ತೆರಳುತ್ತಿತ್ತು. ಖಾಸಗಿ ಬಸ್​​ ಮುರುಗಮಲ್ಲದಿಂದ ಚಿಂತಾಮಣಿಗೆ ಹೋಗುತ್ತಿತ್ತು. ಈ ವೇಳೆ ಖಾಸಗಿ ಬಸ್ಸ್ ಹಾಗೂ ಟಾಟಾ ಏಸ್​ ನಡುವೆ  ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಏಸ್​ನಲ್ಲಿದ್ದ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್​​​​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಚಿಂತಾಮಣಿ ಹಾಗೂ ಕೋಲಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟಾಟಾ ಏಸ್​ನಲ್ಲಿದ್ದ ಪ್ರಯಾಣಿಕರು ಕೋಲಾರ, ಚಿಕ್ಕಬಳ್ಳಾಪುರದ ಚಿಂತಾಮಣಿ ವ್ಯಾಪ್ತಿಗೆ ಸೇರಿದವರು ಎಂದು ಹೇಳಲಾಗುತ್ತಿದೆ. ಬಸ್​​ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments