Home ರಾಜ್ಯ ಸಿದ್ಧಾರ್ಥ್​ ಗೌರವಾರ್ಥ​ ಚಿಕ್ಕಮಗಳೂರು ನಗರ ಬಂದ್​

ಸಿದ್ಧಾರ್ಥ್​ ಗೌರವಾರ್ಥ​ ಚಿಕ್ಕಮಗಳೂರು ನಗರ ಬಂದ್​

ಚಿಕ್ಕಮಗಳೂರು : ಉದ್ಯಮಿ ಸಿದ್ದಾರ್ಥ್​ ಸಾವಿನ ಹಿನ್ನಲೆ ಗೌರವಾರ್ಥವಾಗಿ ಚಿಕ್ಕಮಗಳೂರು ನಗರದಲ್ಲಿ ಸ್ವಯಂ ಪ್ರೇರಿತ ಬಂದ್​ ಮಾಡಲಾಗುತ್ತಿದೆ.

ಚಿಕ್ಕಮಗಳೂರು ಕಾಫಿ ಬೆಳೆಗಾರರಿಗೆ ಸಿದ್ಧಾರ್ಥ್​ರವರ ಕೊಡುಗೆ ಅಪಾರ.  ಅನಾರೋಗ್ಯದಲ್ಲಿದ್ದ ಕಾಫಿ ಕ್ಯೂರಿಂಗ್​ ಉದ್ಯಮ ಮೇಲೆತ್ತಿ ಸಾವಿರಾರು ಜನರಿಗೆ ಉದ್ಯೋಗವಕಾಶ ನೀಡಿದ್ದರು. ಸಿದ್ದಾರ್ಥ್​ರವರ ಸಾವು ಚಿಕ್ಕಮಗಳೂರು ಜನತೆಗೆ ತೀವ್ರ ನೋವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಗೌರವ ಪೂರ್ವಕವಾಗಿ  ಇಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ವಿವಿಧ ಸಂಘಟನೆಗಳಿಂದ  ಸ್ವಯಂ ಪ್ರೇರಿತ ಬಂದ್ ಮಾಡಲು ಕರೆ ನೀಡಲಾಗಿದೆ.   ನಗರದ ಎಲ್ಲಾ ಅಂಗಡಿ – ಮುಂಗಟ್ಟುಗಳನ್ನು ಈ ವೇಳೆ ಮುಚ್ಚಲು ವರ್ತಕರು ತೀರ್ಮಾನಿಸಿದ್ದಾರೆ.

ಇನ್ನು ಸಿದ್ಧಾರ್ಥ್​ ಅಂತ್ಯ ಸಂಸ್ಕಾರದಲ್ಲಿ ಸಿಎಂ ಯಡಿಯೂರಪ್ಪನವರು ಭಾಗಿಯಾಗಲಿದ್ದು, ಮಧ್ಯಾಹ್ನ 2.40ಕ್ಕೆ ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ.   

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments