Sunday, May 29, 2022
Powertv Logo
Homeuncategorized ಭಯ ಹುಟ್ಟಿಸಿದ ವೈದ್ದೆಯ ಟ್ರಾವೆಲ್ ಹಿಸ್ಟರಿ..!

 ಭಯ ಹುಟ್ಟಿಸಿದ ವೈದ್ದೆಯ ಟ್ರಾವೆಲ್ ಹಿಸ್ಟರಿ..!

ಚಿಕ್ಕಮಗಳೂರು : ಗುರುವಾರ ಚಿಕ್ಕಮಗಳೂರು ನಗರದ ಕೋವಿಡ್ ಆಸ್ವತ್ರೆಯಲ್ಲಿ ಕರೊನಾದಿಂದ 72 ವರ್ಷದ ವೃದ್ದೆ ಸಾವನ್ನಪ್ಪಿದ ಪ್ರಕರಣ ಸಂಬಂಧ ವೃದ್ಧೆಯ‌ 52 ವರ್ಷದ ಮಗನಿಗೂ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಈಗ ವೃದ್ಧೆಯ ಟ್ರಾವೆಲ್ ಹಿಸ್ಟರಿ ಜಿಲ್ಲೆಯಲ್ಲಿ ಭಯ ಹುಟ್ಟಿಸಿದ್ದರೇ, ಇತ್ತ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಬೀರೂರು, ಅಜ್ಜಂಪುರ ಭಾಗದ ಜನರಲ್ಲಿ ಆತಂಕ ಮನೆ ಮಾಡಿದೆ. ಮೃತ ವೃದ್ಧೆಯ ಟ್ರಾವೆಲ್ ಹಿಸ್ಟರಿ ಗಾಬರಿ ಹುಟ್ಟಿಸಿದ್ದು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಮೃತರಿಗೆ ಕರೊನಾ ಸೋಂಕು ತಗುಲಿತ್ತು ಎಂದು ಹೇಳಲಾಗುತ್ತಿದೆ. ಚನ್ನಗಿರಿಯ ಕುಂಬಾರ ಬೀದಿಯಲ್ಲಿ ಮೃತ ವೃದ್ಧೆಯ ಮಗಳ ಮನೆಯಿದ್ದು, ವೃದ್ದೆಯೂ ಮಗಳ ಮನೆಗೆ ತೆರಳಿದ್ದರು.ಅವರ ಎದುರು ಮನೆಯ 52 ವರ್ಷದ ಮಹಿಳೆಗೆ ಕರೊನಾ ಸೋಂಕು ತಗುಲಿ ಶಿವಮೊಗ್ಗದಲ್ಲಿ ಮೃತರಾಗಿದ್ದರು. ವೃದ್ಧೆಯಿಂದ ಕುಂಬಾರು ಬೀದಿಯನ್ನು‌ ಸೀಲ್ ಡೌನ್ ಮಾಡಲಾಗಿತ್ತು.ಚನ್ನಗಿರಿಯಲ್ಲಿವೃದ್ಧೆಗೆ‌ ಆರೋಗ್ಯ ಸಮಸ್ಯೆ ಕಾಡಿದ್ದು ಚನ್ನಗಿರಿಯ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.‌ಅಲ್ಲಿ ವಾಸಿಯಾಗದ ಕಾರಣ ಬೀರೂರಿಗೆ ಬಂದು ಸೋಮವಾರ ಪರಿಚಯವಿದ್ದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ನಂತರದಲ್ಲಿ ಮಂಗಳವಾರ ಅಜ್ಜಂಪುರದ ಖಾಸಗಿ ಆಸ್ವತ್ರೆಯಲ್ಲಿ ವೃದ್ಧೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಮಂಗಳವಾರ ಶಿವಮೊಗ್ಗದಲ್ಲಿ‌ ಕೋವಿಡ್ ನಿಂದ ಸಾವು ಸಂಭವಿಸಿದ ಸುದ್ದಿ ಬರುತ್ತಿದ್ದಂತೆ, ವೃದ್ಧೆಯನ್ನು ತರೀಕೆರೆಗೆ ಕಳುಹಿಸಿ ವೃದ್ಧೆ ಗಂಟಲು ದ್ರವವನ್ನು ಆಸ್ವತ್ರೆಯಲ್ಲಿ ಸಂಗ್ರಹಿಸಿ ಶಿವಮೊಗ್ಗ ‌ಲ್ಯಾಬ್’ಗೆ‌ ಕಳುಹಿಸಲಾಗಿತ್ತು. ಬುಧವಾರ ಸಂಜೆ ಸುಮಾರಿಗೆ ಚಿಕ್ಕಮಗಳೂರು ಕೊವೀಡ್ ಆಸ್ವತ್ರೆಗೆ ವೃದ್ಧೆಯನ್ನು ದಾಖಲು ಮಾಡಲಾಯಿತು. ಗುರುವಾರ ಸಂಜೆ ವೇಳೆಗೆ ಮೃತ ವೃದ್ದೆಗೆ ಸೋಂಕು‌ ತಗುಲಿರುವುದು ದೃಢ ಪಟ್ಟಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ 12.30ರ ಸುಮಾರಿಗೆ ಮೃತರಾಗಿದ್ದಾರೆ. ಅಜ್ಜಂಪುರ, ಬೀರೂರಿನ ಖಾಸಗಿ ಆಸ್ವತ್ರೆ ಮಾತ್ರವಲ್ಲದೇ ಸರ್ಕಾರಿ‌ ಆಸ್ವತ್ರೆಯಲ್ಲಿಯೂ ಚಿಕಿತ್ಸೆ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಮೂಲಗಳ ಮಾಹಿತಿ ಪ್ರಕಾರ ಮೃತ ವೃದ್ದೆಗೆ ಒಟ್ಟು ಆರು ವೈದ್ಯರು ಹಾಗೂ ದಾದಿಯರು ಚಿಕಿತ್ಸೆ ನೀಡಿದ್ದರು. ಇವರಿಗೆ ಕರೊನಾ ಕಂಟಕ ಎದುರಾಗುವ ಸಾಧ್ಯತೆಯಿದೆ. ವೃದ್ಧೆಯ ಸಂಪರ್ಕದಲ್ಲಿದ್ದ ಕೆಲವರನ್ನು ಜಿಲ್ಲಾಡಳಿತ ಕೋವಿಡ್ ಪರೀಕ್ಷೆ ಮಾಡಿದ್ದು. ಆದರೇ, ಈ ಯಾವುದೇ ಆಸ್ವತ್ರೆಯನ್ನು ಸೀಲ್ ಡೌನ್ ಮಾಡದೇ ಬೇಜವಾಬ್ದಾರಿ ಪ್ರದರ್ಶಿಸುತ್ತಿದೆ. ಇಲ್ಲದೆ  ಅಜ್ಜಂಪುರ, ಬೀರೂರಿನಲ್ಲಿ ಆತಂಕಕ್ಕೆ ಕಾರಣವಾಗಿದೆ. ವೃದ್ಧೆಯ ಪ್ರಾಥಮಿಕ ಸಂಪರ್ಕದಲ್ಲಿದ ದಾದಿಯರು, ವೈದ್ಯರಿಂದ ಹೊರ ರೋಗಿಗಳಿಗೂ ಸೋಂಕು ಹರಡು ಸಾಧ್ಯತೆಯಿರುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.

ವೃದ್ಧೆಯ ಸಾವಿನ ವಿಷಯ ತಿಳಿಯುತ್ತಿದ್ದಂತೆ, ಡಣಯಕಾಪುರ ಗ್ರಾಮದಲ್ಲೂ ಹಲವರು ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ. ಮನೆಯಿಂದ ಹೊರ ಬರಲು ಗ್ರಾಮಸ್ಥರು ಹೆದರುತಿದ್ದಾರೆ. ಗುರುವಾರ ತಡರಾತ್ರಿ ವೃದ್ಧೆಯ ಜಮೀನಿನಲ್ಲಿ ಜಿಲ್ಲಾಡಳಿತ ಅಂತ್ಯ ಸಂಸ್ಕಾರ ಮಾಡಿದೆ…

LEAVE A REPLY

Please enter your comment!
Please enter your name here

- Advertisment -

Most Popular

Recent Comments