Home ರಾಜ್ಯ 3 ದಿನ – 4 ಸಾವು ; ಕೊರೋನಾಗೆ ಕಾಫಿನಾಡು ಕಂಗಾಲು

3 ದಿನ – 4 ಸಾವು ; ಕೊರೋನಾಗೆ ಕಾಫಿನಾಡು ಕಂಗಾಲು

ಚಿಕ್ಕಮಗಳೂರು : ಸೋಮವಾರ 2, ಮಂಗಳವಾರ 1, ಬುಧವಾರ 1 ..! ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೋನಾಗೆ ನಾಲ್ಕು ಮಂದಿ ಪ್ರಾಣ ತೆತ್ತಿದ್ದಾರೆ. ದಿನದಿಂದ ದಿನಕ್ಕೆ ಕೊರೋನ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು, ಜನ ತೀವ್ರ ಆತಂಕಕ್ಕೀಡಾಗಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ  72 ವರ್ಷದ ವೃದ್ಧೆ ಚಿಕ್ಕಮಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ಜಿಲ್ಲೆಯಲ್ಲಿ ಪ್ರಸ್ತುತ 170 ಕೊರೋನಾ ಪಾಸಿಟಿವ್ ಪ್ರಕರಣಗಳಿವೆ. 170 ರಲ್ಲಿ ಏಳು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅವುಗಳಲ್ಲಿ ಮೂರೇ ದಿನಕ್ಕೆ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

 ಜಿಲ್ಲೆಯಲ್ಲಿ ಕೊರೋನಾ ಆರಂಭದ ಮೊದಲ 55 ದಿನಗಳ ಕಾಲ ಒಂದೇ ಒಂದು ಪಾಸಿಟಿವ್ ಪ್ರಕರಣಗಳು ಇರಲಿಲ್ಲ. ಆದರೆ ಮೇ 19ಕ್ಕೆ ಆರಂಭವಾದ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 55 ದಿನಕ್ಕೆ 176ಕ್ಕೆ ಏರಿಕೆಯಾಗಿದೆ. ಆ 170 ಪ್ರಕರಣಗಳಲ್ಲಿ 7 ಮಂದಿ ಪ್ರಾಣ ಕಳೆದುಕೊಂಡಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಗುಣಮುಖವಾಗುತ್ತಿರುವ ಪ್ರಕರಣಗಳ ಸಂಖ್ಯೆಯು ಹೆಚ್ಚಿದೆ. ಆದರೆ ಈ ಮಧ್ಯೆ ಸಾವಿನ ಸಂಖ್ಯೆ ಕೂಡ ಹೆಚ್ಚಾಗಿರುವುದು ಜಿಲ್ಲೆಯ ಜನರ ನಿದ್ದೆಗೆಡಿಸಿದೆ.

-ಸಚಿನ್ ಶೆಟ್ಟಿ, ಚಿಕ್ಕಮಗಳೂರು

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments