Home ರಾಜ್ಯ ಅಪಘಾತ ; ಹೊತ್ತಿ ಉರಿದ ಬೈಕ್​​ಗಳು..!

ಅಪಘಾತ ; ಹೊತ್ತಿ ಉರಿದ ಬೈಕ್​​ಗಳು..!

ಚಿಕ್ಕಮಗಳೂರು : ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಎರಡು ಬೈಕ್ ಗಳು ಸುಟ್ಟು ಕರಕಲಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಗೆದ್ದಲಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗ ಕಡೆಯಿಂದ ಹಾಸನ ಕಡೆ ಹೋಗುತ್ತಿದ್ದ ಯೂನಿಕಾರ್ನ್ ಬೈಕ್ ಹಾಗೂ ಬೆಂಗಳೂರು ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಯೂನಿಕಾರ್ನ್ ಬೈಕಿನಲ್ಲಿದ್ದ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನ 35 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಬೈಕ್ ಗಳು ಡಿಕ್ಕಿಯಾದ ರಭಸಕ್ಕೆ ಮಂಜುನಾಥ್ ಅಫಘಾತದ ಸ್ಥಳದಿಂದ ಸುಮಾರು 20 ಅಡಿ ದೂರಕ್ಕೆ ಹಾರಿ ಬಿದ್ದಿದ್ದಾನೆ. ಇನ್ನು ಪಲ್ಸರ್ ಬೈಕಿನಲ್ಲಿದ್ದ ಇಬ್ಬರು ಯುವಕರಲ್ಲಿ ಸಂಜಯ್ ಎಂಬುವವನ ಸ್ಥಿತಿ ಗಂಭೀರವಾಗಿದ್ದು, ಮತ್ತೋರ್ವ ಸವಾರ ಗೌತಮ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಅಪಘಾತವನ್ನ ಕಂಡು ಕಡೂರಿನ ಜನರು, ಕಡೂರಿನ ಇತಿಹಾಸದಲ್ಲಿ ಇಂತಹ ಅಪಘಾತ ಕಂಡಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೇ ಡಿಕ್ಕಿಯ ರಭಸಕ್ಕೆ ಎರಡು ಬೈಕ್ ಗಳು ಹೊತ್ತಿ ಉರಿದಿದ್ದು ಪೊಲೀಸರು ಕೂಡ ಇದು ಹೇಗೆ ಸಾಧ್ಯ ಎಂದು ಮತ್ತಷ್ಟು ಆಳವಾಗಿ ತನಿಖೆ ಕೈಗೊಂಡಿದ್ದಾರೆ. ಈ ಮಧ್ಯೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿಯಲು ಬೈಕ್ ಸವಾರರ ಬಳಿ ಸ್ಯಾನಿಟೈಸರ್ ಇದ್ದು ಈ ಬೆಂಕಿ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

-ಸಚಿನ್ ಶೆಟ್ಟಿ 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments