Sunday, June 26, 2022
Powertv Logo
Homeರಾಜಕೀಯಚಿಂಚೋಳಿಯಲ್ಲಿ ಬಿಜೆಪಿ, ಕುಂದಗೋಳದಲ್ಲಿ ಕಾಂಗ್ರೆಸ್​ಗೆ ಗೆಲುವು

ಚಿಂಚೋಳಿಯಲ್ಲಿ ಬಿಜೆಪಿ, ಕುಂದಗೋಳದಲ್ಲಿ ಕಾಂಗ್ರೆಸ್​ಗೆ ಗೆಲುವು

ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಕೂಡ ಹೊರಬಿದ್ದಿದೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಅವರ ಪುತ್ರ ಡಾ. ಅವಿನಾಶ್​ ಜಾಧವ್ ಅವರು ಮೈತ್ರಿ ಅಭ್ಯರ್ಥಿ ಸುಭಾಷ್​ ರಾಥೋಡ್​ ಅವರ ವಿರುದ್ಧ ಜಯಗಳಿಸಿದ್ದಾರೆ.
ಕುಂದಗೋಳದಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕಣವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲುವಿನ ನಗೆ ಬೀರಿದ್ದಾರೆ.
ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಚಿಂಚೋಳಿಯಲ್ಲಿ, ಸಿ.ಎಸ್​ ಶಿವಳ್ಳಿ ಅವರ ನಿಧನದಿಂದ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು. ಒಂದರಲ್ಲಿ ಬಿಜೆಪಿ, ಇನ್ನೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.

2 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments