Home ರಾಜ್ಯ ಚಲಿಸುತ್ತಿದ್ದ ಖಾಸಗಿ ಬಸ್​ನಲ್ಲಿ ದಿಢೀರ್ ಬೆಂಕಿ ; ಮಗು ಸೇರಿದಂತೆ ಐವರು ಸಜೀವದಹನ

ಚಲಿಸುತ್ತಿದ್ದ ಖಾಸಗಿ ಬಸ್​ನಲ್ಲಿ ದಿಢೀರ್ ಬೆಂಕಿ ; ಮಗು ಸೇರಿದಂತೆ ಐವರು ಸಜೀವದಹನ

ಚಿತ್ರದುರ್ಗ :  ಚಲಿಸುತ್ತಿದ್ದ ಖಾಸಗಿ ಬಸ್​ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಮಕ್ಕಳು ಸೇರಿದಂತೆ 5 ಮಂದಿ ಸಜೀವದಹನವಾಗಿದ್ದಾರೆ. 

ಚಿತ್ರದುರ್ಗದ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು ಬೆಳೆಗಿನ ಜಾವ ಈ ದುರಂತ ಸಂಭವಿಸಿದೆ. ವಿಜಯಪುರದ ನೀಡಗುಂದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಕೆ.ಎ. 51 ಎಡಿ 7449 ಕುಕ್ಕೇಶ್ರೀ ಟ್ರಾವೆಲ್ಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬಸ್ಸಿನಲ್ಲಿ ಒಟ್ಟು 35 ಜನ ಪ್ರಯಾಣಿಕರು ಇದ್ದರು ಅಂತ ಅಂದಾಜಿಸಲಾಗಿದೆ. ಉಳಿದ 30 ನರ ಪೈಕಿ ಗಾಯಗೊಂಡರವನ್ನು ಚಿಕಿತ್ಸೆಗಾಗಿ ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆಗೆ ಬಸ್ಸಿನ ತಾಂತ್ರಿಕ ದೊಷ ಅಂತ ಶಂಕಿಸಲಾಗಿದೆ . ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸದ್ಯ, ಹಿರಿಯೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments