Saturday, May 28, 2022
Powertv Logo
Homeರಾಜ್ಯಶಾಸಕ ಪ್ರಿಯಾಂಕ್ ಖರ್ಗೆಗೆ CID ನೋಟಿಸ್

ಶಾಸಕ ಪ್ರಿಯಾಂಕ್ ಖರ್ಗೆಗೆ CID ನೋಟಿಸ್

ಕಲಬುರಗಿ : ಶಾಸಕ ಪ್ರಿಯಾಂಕ್‌ ಖರ್ಗೆಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದು, ಇಂದು ಬೆಂಗಳೂರಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಈಗ ಸಿಐಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪೊಲೀಸರು ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ನೋಟಿಸ್ ನಲ್ಲಿ 545 PSI ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಪೊಲೀಸರು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದು, ವಿಚಾರಣೆಗೆ ತೆರಳುವ ಬಗ್ಗೆ ಖರ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಇನ್ನು, PSI ಅಕ್ರಮದ ಬಗ್ಗೆ ಸಚಿವ ಸುನೀಲ್ ಕುಮಾರ್ ಖರ್ಗೆಯನ್ನೇ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆ ಪೂರ್ಣವಾಗಬೇಕಾದ್ರೆ ಅವರನ್ನು ತನಿಖೆಗೆ ಒಳಪಡಿಸಬೇಕು. ಇಲ್ಲವಾದರೆ ತನಿಖೆ ಪೂರ್ಣವಾಗಲ್ಲ ಅಂತ ಹೇಳಿಕೆ ನೀಡಿದ್ದಾರೆ. ಆದರೆ ಹಗರಣದಲ್ಲಿ ಸಿಕ್ಕಿ ಬೀಳುತ್ತಿರುವ ಆರೋಪಿಗಳೆಲ್ಲರೂ ಅವರ ಮನೆ ಸುತ್ತ ಗಿರಕಿ ಹೊಡೆಯುವವರೇ ಆಗಿದ್ದಾರೆ. ಹೀಗಾಗಿ ಮೊದಲು ಅವರನ್ನ ತನಿಖೆಗೆ ಒಳಪಡಿಸಿ ಎಂದು ಸುನೀಲ್ ಆಗ್ರಹಿಸಿದ್ದಾರೆ.

- Advertisment -

Most Popular

Recent Comments