Monday, May 23, 2022
Powertv Logo
Homeರಾಜ್ಯಸರ್ಕಾರಿ ನೌಕರರ ದಿನಾಚರಣೆಗೆ ಸಿಎಂ ಬೊಮ್ಮಾಯಿ ಚಾಲನೆ

ಸರ್ಕಾರಿ ನೌಕರರ ದಿನಾಚರಣೆಗೆ ಸಿಎಂ ಬೊಮ್ಮಾಯಿ ಚಾಲನೆ

ಶಿವಮೊಗ್ಗ : ದೇಶದಲ್ಲೇ ಪ್ರಥಮವಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ದಿನಾಚರಣೆಗೆ ಚಾಲನೆ ನೀಡಿದರು.

ಉತ್ತಮ ಸೇವೆಗೈದ ಅಧಿಕಾರಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಕೂಡ ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಬೊಮ್ಮಾಯಿ, ಗ್ರಾ.ಪಂ ಯಿಂದ ಹಿಡಿದು ವಿಧಾನಸೌಧದವರೆಗೆ ಈ ತಂತ್ರಜ್ಞಾನ ಬಳಕೆಯ ವ್ಯವಸ್ಥೆ ಬಂದಿದೆ. ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುತ್ತವೆ. ಅದಕ್ಕೆ ನಾವು ನಮ್ಮ ಸಾಮಾಜಿಕ, ಜನಪರ ಕೆಲಸ, ಕಾರ್ಯಕ್ಷಮತೆಯ ಮೂಲಕ ಉತ್ತರ ನೀಡಬೇಕು. ಅದನ್ನು ನಾನು ನಿಮ್ಮಿಂದ ಬಯಸುತ್ತಿದ್ದೇನೆ.

ಬನ್ನಿ ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡೋಣ, ಆಳುವ ರೀತಿ ಬದಲಾಯಿಸೋಣ, ಜನಸಾಮಾನ್ಯರ ಬಳಿಗೆ ವ್ಯವಸ್ಥೆಯನ್ನು ಕೊಂಡೊಯ್ಯೋಣ. ಬಡವರು, ರೈತರು, ದೀನ ದಲಿತರು ಸೇರಿ ಎಲ್ಲರ ಅಭಿವೃದ್ಧಿಗಾಗಿ ಪ್ರತಿಜ್ಞೆ ಮತ್ತು ಸಮಯಪ್ರಜ್ಞೆಯಿಂದ ಕೆಲಸ ಮಾಡೋಣವೆಂದು ಕರೆ ನೀಡಿದರು.

- Advertisment -

Most Popular

Recent Comments