ಶಿವಮೊಗ್ಗ : ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಆದ ಹಾನಿಯ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೋಮು ಗಲಭೆಗಳ ನಿಯಂತ್ರಣಕ್ಕೆ ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಅನಗತ್ಯ. ಸಮಾಜದ ಶಾಂತಿಗೆ ಭಂಗ ತರುವವರ ವಿರುದ್ಧ ಕಾನೂನು ಪ್ರಕಾರವೇ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು.’
ಇನ್ನು ಉತ್ತರ ಪ್ರದೇಶದಲ್ಲಿ ಅಲ್ಲಿನ ಪರಿಸ್ಥಿತಿ ಅನುಗುಣವಾಗಿ ಕೆಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ. ನಾವು ನಮ್ಮ ನೆಲದ ನೀತಿ-ನಿಯಮಗಳ ಅನ್ವಯ ಕ್ರಮ ಕೈಗೊಂಡಿದ್ದೇವೆ’ ಎಂದು ಬೊಮ್ಮಾಯಿ ಅವರು ತಿಳಿಸಿದರು.