ಚಾಮರಾಜನಗರ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.
ಶೃಂಗೇರಿಗೂ ಸಿಎಂ ಭೇಟಿ ನೀಡಿದ್ದು, ಸಿಎಂ ಭೇಟಿಗೆ ಸ್ವಾಗತ ಕೋರಿ ಅಣಕವಾಡುತ್ತಿರುವ ಬ್ಯಾನರೊಂದು ಪತ್ತೆಯಾಗಿದೆ. “ದಯವಿಟ್ಟು ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು” ಎಂದು ಸಿಎಂ ಗೆ ಸೂಚಿಸುತ್ತಿರುವ ಬ್ಯಾನರ್ ಗಮನ ಸೆಳೆಯುತ್ತಿದೆ.
ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ 15 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ, ಸರ್ಕಾರ ಪದೇ ಪದೇ ಮಾತು ತಪ್ಪುತ್ತಿದೆ. ಹೀಗಾಗಿ ಸಿಎಂ ಗೆ ಸ್ವಾಗತ ಕೋರಿ ನಿಧಾನವಾಗಿ ಚಲಿಸುವಂತೆ ಎಚ್ಚರಿಸುವ ಬ್ಯಾನರ್ ಹಾಕಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.