Home uncategorized ನಾಳೆ ಸಿಎಂ ಆಲಮಟ್ಟಿ ಜಲಾಶಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ, ಜಿಲ್ಲಾಡಳಿತದಿಂದ ಸಕಲ ಸಿದ್ದತೆ

ನಾಳೆ ಸಿಎಂ ಆಲಮಟ್ಟಿ ಜಲಾಶಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ, ಜಿಲ್ಲಾಡಳಿತದಿಂದ ಸಕಲ ಸಿದ್ದತೆ

ವಿಜಯಪುರ : ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಲಿದ್ದು, ಸಿಎಂ ಅಧಿಕೃತ ಪ್ರವಾಸ ವೇಳಾಪಟ್ಟಿಯಲ್ಲಿ ಬಾಗಿನ ಅರ್ಪಣೆ ಮಾಹಿತಿ ಇಲ್ಲದಿದ್ದರೂ, ಅಧಿಕಾರಿ ವರ್ಗ ಮಾತ್ರ ಬಾಗಿನ ಅರ್ಪಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ ಹೇಳಿದ್ದಾರೆ. ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ಅವಲೋಕಿಸಲು ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಜಿಲ್ಲೆಯ ಜೀವನಾಡಿ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಲಿದ್ದು, ಇಲ್ಲಿ ಸಹಜವಾಗಿಯೇ ಸಿಎಂ ಬಿ ಎಸ್​ ವೈ ಕೃಷ್ಣೆಗೆ ಬಾಗಿನ ಅರ್ಪಿಸುತ್ತಾರಾ ಎಂಬ ಗೊಂದಲ ಸಹ ಇದೆ, ಅವರ ಅಧಿಕೃತ ಪ್ರವಾಸ ವೇಳಾಪಟ್ಟಿಯಲ್ಲಿ ಬಾಗಿನ ಅರ್ಪಣೆ ಮಾಹಿತಿ ಇಲ್ಲದಿದ್ದರೂ, ಅಧಿಕಾರಿಗಳು ಮಾತ್ರ ಬಾಗಿನ ಅರ್ಪಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು. ನಾಳೆ ಸಿಎಂ ಬೆಳಗಾವಿಯಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಿ, ಜಲಾಶಯವನ್ನು ವೀಕ್ಷಿಸಲಿದ್ದಾರೆ. ನಂತರ ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳ ಉನ್ನತಮಟ್ಟದ ಸಭೆ ನಡೆಸಿ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ ಪೂರ್ವ ಸಿದ್ಧತೆ ಮಾಡಿಕೊಂಡಿದೆ. ಎರಡು ಗಂಟೆಯವರೆಗೆ ಆಲಮಟ್ಟಿಯಲ್ಲಿ ಸಿಎಂ ಇರುವ ಕಾರಣ ಅವರು ಭೇಟಿ ನೀಡುವ ಸ್ಥಳಗಳಲ್ಲಿ ವೈದ್ಯಕೀಯ ತಂಡ ಇರಲಿದ್ದು, ಹೆಲಿಕಾಪ್ಟರ್​​​ನಿಂದ ಇಳಿದ ಬಳಿಕ ಥರ್ಮಲ್ ಸ್ಕ್ರೀನಿಂಗ್​​ಗೆ ಸಿಎಂ ಒಳಗಾಗಲಿದ್ದಾರೆ. ಜೊತೆಗೆ ಸಿಎಂ ಅವರಿಗೆ ಅಡುಗೆ ತಯಾರಿಸುವವರು, ಊಟ ಬಡಿಸುವವರನ್ನು ಸಹ ರ್ಯಾಪಿಡ್ ಟೆಸ್ಟ್​​ಗೆ ಒಳಗಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು…

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments