Home ರಾಜ್ಯ ಇತರೆ ರೆಸಾರ್ಟ್​ ವಾಸ್ತವ್ಯ ಅಂತ್ಯ, ಇಂದು ಔತಣ ಕೂಟ..!

ರೆಸಾರ್ಟ್​ ವಾಸ್ತವ್ಯ ಅಂತ್ಯ, ಇಂದು ಔತಣ ಕೂಟ..!

ಬೆಂಗಳೂರು: ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಇಂದು ಇಬ್ಬನಿ ರೆಸಾರ್ಟ್​ ಬಿಟ್ಟು ಹೊರಬರಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಚೆಕ್​ ಸಿಎಂ ಚೆಕ್​​ ಔಟ್ ಆಗಲಿದ್ದಾರೆ. ಚುನಾವಣೆ ನಂತರ ಇಂದೇ ಮೊದಲ ಬಾರಿ ಸಿಎಂ ಮಂಡ್ಯಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ1.30ಕ್ಕೆ ಮದ್ದೂರಿನ ಸೋಮನಹಳ್ಳಿಗೆ ಆಗಮಿಸಲಿದ್ದಾರೆ. ಅಲ್ಲಿ ಆಪ್ತ ಸಹಾಯಕ ಕೋಣಸಾಲೆ ರಘು ಬೀಗರ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಕಳೆದ 3 ದಿನಗಳಿಂದ ಮಡಿಕೇರಿ ಹೊರವಲಯದಲ್ಲಿರುವ ಇಬ್ಬನಿ ರೆಸಾರ್ಟ್​ನಲ್ಲಿ ಸಿಎಂ ಕುಮಾರಸ್ವಾಮಿ ರೆಸ್ಟ್​ನಲ್ಲಿದ್ದರು. ಸಿಎಂ ಜೊತೆ ಪತ್ನಿ ಅನಿತಾ, ಪುತ್ರ ನಿಖಿಲ್ ಅವರೂ ಇದ್ದರು. ಸಿಎಂಗೆ ಸಾ.ರಾ.ಮಹೇಶ್, ಪುಟ್ಟರಾಜು ಅವರೂ ಸಾಥ್ ನೀಡಿದ್ದರು. ರಾಜ್ಯದಲ್ಲಿ ಬರದಿಂದ ಜನ ಕಷ್ಟ ಪಡುತ್ತಿದ್ದು, ನಿನ್ನೆಯಷ್ಟೇ ಸಿಎಂ ರೆಸಾರ್ಟ್ ವಾಸ್ತವ್ಯ ಖಂಡಿಸಿ ಪ್ರತಿಭಟನೆ ನಡೆದಿತ್ತು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments