Home ರಾಜ್ಯ ಇತರೆ ಪುತ್ರನ ಜೊತೆ ಸಿಎಂ ಪೂಜೆ - ಮಾಧ್ಯಮದವರಿಗೆ ನಿರ್ಬಂಧ..!

ಪುತ್ರನ ಜೊತೆ ಸಿಎಂ ಪೂಜೆ – ಮಾಧ್ಯಮದವರಿಗೆ ನಿರ್ಬಂಧ..!

ಚಿಕ್ಕಮಗಳೂರು: ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರು ಕುಡಿನಲ್ಲಿಗೆ ಗ್ರಾಮದ ಉಮಾಮಹೇಶ್ವರಿ ದೇವಾಲಯಕ್ಕೆ ಆಗಮಿಸಿದ್ದಾರೆ. ರುದ್ರ ಯಾಗ, ಗಣಪತಿ ಹೋಮದ ಸಂಕಲ್ಪಕ್ಕೆ ಆಗಮಿಸಿದ ಸಿಎಂ ನಾಳೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕುಡಿನೆಲ್ಲಿ ಯಾಗದ ಪೂರ್ಣಹುತಿ ನಡೆಸಲಿದ್ದಾರೆ. ದೇವಾಲಯಕ್ಕೆ ಸಿಎಂ ಜೊತೆ ಕೆಲವರಿಗೆ ಮಾತ್ರ ಪ್ರವೇಶ ಅನುಮತಿಸಲಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ಯಾಗ ಹಿನ್ನೆಲೆ ಭದ್ರತೆ ನೆಪದಲ್ಲಿ ಪೊಲೀಸರು ಸಾರ್ವಜನಿಕರಿಗೆ ನಿರ್ಬಂಧ ಹೇರಿದ್ದಾರೆ. ಹಾಗೆಯೇ ಮಾಧ್ಯಮದವರನ್ನೂ ಪೂಜಾ ಸ್ಥಳದಿಂದ ಒಂದು ಕಿ.ಮೀ ದೂರದಲ್ಲಿದ್ದು, ಯಾರಿಗೂ ಪ್ರವೇಶಕ್ಕೆ ಅನುಮತಿಸಿಲ್ಲ.

ಪೂಜೆಯಲ್ಲಿ ಸಿಎಂ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆ ಸಚಿವ ರೇವಣ್ಣ ಅವರೂ ಭಾಗವಹಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಪೂಜೆಯಲ್ಲಿ ಭಾಗವಹಿಸಿ ತೆರಳಿದ್ದಾರೆ. ಕೊಪ್ಪ ಸಮೀಪದ ಉಮಾಮಹೇಶ್ವರಿ ದೇವಾಲಯದಲ್ಲಿ ಯಾಗ ನಡೆದಿದ್ದು, ದೇವಸ್ಥಾನದಿಂದ 200 ಅಡಿ ದೂರದವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ದೇವಾಲಯದ ಸುತ್ತಲೂ ನೂರಾರು ಪೊಲೀಸರ ನಿಯೋಜನೆ ಮಾಡಲಾಗಿದೆ.

ಕಳೆದ ಭಾನುವಾರ ಪ್ರಕೃತಿ ಚಿಕಿತ್ಸೆಗೆ ಸಿಎಂ ಅವರು ಉಡುಪಿಗೆ ಆಗಮಸಿದ್ದರು. ಉಡುಪಿಯ ಕಾಪುವಿನಲ್ಲಿರುವ ಸಾಯಿರಾಧ ಹೆರಿಟೇಜ್ ರೆಸಾರ್ಟ್​ನಲ್ಲಿ ಸಿಎಂ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರೂ ಪಕೃತಿ ಚಿಕಿತ್ಸೆಗೆ ಆಗಮಿಸಿದ್ದರು. ಅಲ್ಲಿಂದ ನೇರವಾಗಿ ಚಿಕ್ಕಮಗಳೂರಿಗೆ ಬಂದು ಪೂಜೆಯಲ್ಲಿ ನಿರತರಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments