Home ರಾಜ್ಯ ಇತರೆ ಶತ್ರು ಸಂಹಾರಕ್ಕಾಗಿ ಸಿಎಂ ವಿಶೇಷ ಪೂಜೆ

ಶತ್ರು ಸಂಹಾರಕ್ಕಾಗಿ ಸಿಎಂ ವಿಶೇಷ ಪೂಜೆ

ಚಿಕ್ಕಮಗಳೂರು: ಸಿ.ಎಂ. ಹೆಚ್​​.ಡಿ. ಕುಮಾರಸ್ವಾಮಿ ಇಂದು ಉಡುಪಿಯಿಂದ ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ. ಅಮಾವಾಸ್ಯೆಯಂದೇ ಸಿಎಂ ವಿಶೇಷ ಪೂಜೆ ನಡೆಸಲಿದ್ದು, ಹೋಮ-ಹವನವನ್ನೂ ನಡೆಸಲಿದ್ದಾರೆ. ಉಡುಪಿಯಿಂದ ಚಿಕ್ಕಮಗಳೂರಿಗೆ ಆಗಮಿಸಲಿರೋ ಸಿಎಂ ಶತ್ರು ಸಂಹಾರ, ಯಶಸ್ಸು ಹಾಗೂ ಶ್ರೇಯಸ್ಸಿಗಾಗಿ ಉಮಾಮಹೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ಇಂದು ಸಂಜೆ ಕೊಪ್ಪಗೆ ಆಗಮಿಸಲಿರೋ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕೊಪ್ಪ ತಾಲೂಕಿನ ಕಮ್ಮರಡಿ ಬಳಿಯ ಕುಡ್ನಳ್ಳಿಯಲ್ಲಿರೋ ದೇವಾಲಯದಲ್ಲಿ ರುದ್ರಹೋಮ ಹಾಗೂ ಗಣಪತಿ ಹೋಮ ನಡೆಸಲಿದ್ದಾರೆ. ಕೊಪ್ಪಾ ತಾಲೂಕಿನ ತಲವಾನೆ ಎಸ್ಟೇಟ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗಣೇಶ್ ಸೋಮಾಯಜಿ ಸೂಚನೆ ಮೇರೆಗೆ ಪೂಜೆ ನಡೆಯುತ್ತಿದೆ.

ಕಳೆದ ಭಾನುವಾರ ಪ್ರಕೃತಿ ಚಿಕಿತ್ಸೆಗೆ ಸಿಎಂ ಅವರು ಉಡುಪಿಗೆ ಆಗಮಸಿದ್ದರು. ಉಡುಪಿಯ ಕಾಪುವಿನಲ್ಲಿರುವ ಸಾಯಿರಾಧ ಹೆರಿಟೇಜ್ ರೆಸಾರ್ಟ್​ನಲ್ಲಿ ಸಿಎಂ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರೂ ಪಕೃತಿ ಚಿಕಿತ್ಸೆಗೆ ಆಗಮಿಸಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments