ಪ್ರಧಾನಿ ಜೊತೆ ಸಿಎಂ ಚರ್ಚೆ: ಅನುದಾನ ಬಿಡುಗಡೆಗೆ ಮನವಿ ಸಾಧ್ಯತೆ

0
121

ದೆಹಲಿ: ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಇಂದು ಬೆಳಗ್ಗೆ 10.15ಕ್ಕೆ ಸಿಎಂ ಅವರು ಪ್ರಧಾನಿ ಅವರನ್ನು ಭೇಟಿ ಮಾಡಲಿದ್ದು, ಬರ ಹಾಗೂ ನರೇಗಾ ಯೋಜನೆಯ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಹಾಗೇ ಕೇಂದ್ರದಿಂದ ರಾಜ್ಯಕ್ಕೆ ಬಾಕಿ ಇರುವ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುವ ಸಾಧ್ಯತೆಯೂ ಇದೆ.

ಸಿಎಂ ಕುಮಾರಸ್ವಾಮಿ ದೆಹಲಿಯಲ್ಲೇ ಠಿಕಾಣಿ ಹೂಡಿದ್ದು, ಸಚಿವ ರೇವಣ್ಣ ಅವರೂ ಕೂಡ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಲೋಕ ಸಮರಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಜೆಡಿಎಸ್​ ರಣತಂತ್ರ ಮಾಡುತ್ತಿದೆ. ಎಲ್ಲದರ ನಡುವೆ ರೇವಣ್ಣ ಅವರು ಸುಮಲತಾ ಅಂಬರೀಶ್​ ಬಗ್ಗೆ ನೀಡಿರುವ ಹೇಳಿಕೆಯಿಂದ ಜೆಡಿಎಸ್​​ ನಾಯಕರು ದೆಹಲಿಯಲ್ಲಿ ಮುಜುಗರ ಅನುಭವಿಸಿದ್ದಾರೆ.

LEAVE A REPLY

Please enter your comment!
Please enter your name here