ಮಂಡ್ಯ: ಭದ್ರತಾ ದೃಷ್ಟಿಯಿಂದ ಕರಾವಳಿ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಎಚ್ಚರಿಕೆಯಿಂದ ಇರುವಂತೆ ಸಿಎಂ ಹೆಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದ ತೂಬಿನಕೆರೆ ಹೆಲಿಪ್ಯಾಡ್ನಲ್ಲಿ ಏರ್ ಸರ್ಜಿಕಲ್ ಸ್ಟೈಕ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, “ದೇಶದ ರಕ್ಷಣಾ ಇಲಾಖೆ ಪುಲ್ವಾಮಾ ಉಗ್ರದಾಳಿಗೆ ಪ್ರತೀಕಾರ ತೆಗೆದುಕೊಂಡಿದೆ. ಇದು ತುಂಬಾ ಸೆನ್ಸಿಟಿವ್ ವಿಚಾರ. ರಾಜ್ಯದಲ್ಲಿ ಅಧಿಕಾರಿಗಳಿಗೆ ಹೈ ಅಲರ್ಟ್ ಆಗಿರುವಂತೆ ಸೂಚನೆ ನೀಡಿದ್ದೇನೆ. ನಮ್ಮ ರಾಜ್ಯದ ಪೊಲೀಸ್ ಇಲಾಖೆ, ಇಂಟೆಲಿಜೆನ್ಸ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ತಿಳಿಸಿದ್ದೇನೆ” ಅಂತ ಹೇಳಿದ್ರು.
ಹಾಗೆಯೇ ಏರ್ ಸರ್ಜಿಕಲ್ ಸ್ಟ್ರೈಕ್ ನಡೆದ ನಂತರ ಬಿಜೆಪಿಯವ್ರು ಸಂಭ್ರಮಾಚರಣೆ ಮಾಡಿದ ಕುರಿತು ಸಿಎಂ ಪ್ರತಿಕ್ರಿಯಿಸಿದ್ದಾರೆ. ” ಬಿಜೆಪಿಯವ್ರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇಂತಹ ವಿಚಾರಗಳನ್ನು ಪ್ರೋತ್ಸಾಹಿಸದೆ ದೇಶದಲ್ಲಿ ಶಾಂತಿ ಕಾಪಾಡಬೇಕಾಗಿರೋದು ನಮ್ಮ ಕರ್ತವ್ಯ. ” ಎಂದಿದ್ದಾರೆ.