ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಆದೇಶವಿದ್ದರೂ ಜನ ಕ್ಯಾರೆ ಎನ್ನದೆ ಮನೆಯಿಂದ ಹೊರಬರುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಇದೀಗ ಹೊಸ ದಾರಿ ಕಂಡುಕೊಂಡಿದ್ದು, ಸಾರ್ವಜನಿಕರ ಮನೆಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಹೋಮ್ ಡೆಲಿವರಿ ಸಹಾಯವಾಣಿಯನ್ನು ಪ್ರಾರಂಭಿಸಿ ಅದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಜೊತೆಗೂಡಿ ಬಿಬಿಎಂಪಿ ನಗರದಾದ್ಯಂತ ಹೋಮ್ ಡೆಲಿವರಿ ಸೇವೆಯನ್ನು ಒದಗಿಸಲಿದ್ದು, ಜನರು ಮನೆಯಿಂದ ಹೊರಬರದೆ ಅಗತ್ಯ ವಸ್ತುಗಳನ್ನು ಪಡೆಯಲು 08061914960 ಈ ನಂಬರ್ಗೆ ಕರೆ ಮಾಡಿದರೆ ಸಾಕು. ನಿಮಗೆ ಯಾವುದೇ ಅಗತ್ಯ ವಸ್ತುಗಳು ಬೇಕಾದ್ರೂ ನಿಮ್ಮ ಮನೆ ಬಾಗಿಲಿಗೆ ಬರಲಿದೆ.
ಇಂದು ಈ ಯೋಜನೆಗೆ ಚಾಲನೆ ನೀಡಿದ್ದು, ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ್, ಸಂಸದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಕಂದಾಯ ಸಚಿವ ಆರ್.ಅಶೋಕ್, ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಉಪಸ್ಥಿತರಿದ್ದರು.