ಬೆಂಗಳೂರು: ಕೊರೋನಾ ವೈರಸ್ ಹರಡುವುದನ್ನು ತಡೆಯಲು ರಾಜ್ಯದಲ್ಲಿ ಲಾಕ್ಡೌನ್ ಆದೇಶವನ್ನು ಹೊರಡಿಸಿದೆ. ಆದರೆ ರಾಜ್ಯದ ಜನತೆ ಯಾವುದನ್ನು ಲೆಕ್ಕಿಸದೇ ಅನಗತ್ಯವಾಗಿ ರೋಡಿಗಿಳಿಯುತ್ತಿದ್ದಾರೆ. ಹಾಗೆ ಅನಗತ್ಯವಾಗಿ ರೋಡಿಗಿಳಿದವರ ಗಾಡಿಯನ್ನು ಪೊಲೀಸರು ಸೀಜ್ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಆದಮೇಲೂ ಜನತೆ ಮಾತ್ರ ಬುದ್ಧಿ ಕಲಿಯುತ್ತಿಲ್ಲ. ಹಾಗಾಗಿ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಲಾಕ್ಡೌನ್ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ರಾಜ್ಯದ ಜನತೆ ಸದ್ಯದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಮನೆಯಲ್ಲೇ ಕುಳಿತು ಲಾಕ್ಡೌನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲಾವಾದರೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಯಡಿಯೂರಪ್ಪ ರಾಜ್ಯದ ಜನತೆಗೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಇಂದು ಸಂಜೆಯೊಳಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.