Home ರಾಜ್ಯ 'ಕಾಫಿ ನಾಡಿನಲ್ಲಿ ದತ್ತಜಯಂತಿ ಹಿನ್ನಲೆ ಕೇಸರಿ ಮಯವಾದ ಕಾಫಿನಾಡು'

‘ಕಾಫಿ ನಾಡಿನಲ್ಲಿ ದತ್ತಜಯಂತಿ ಹಿನ್ನಲೆ ಕೇಸರಿ ಮಯವಾದ ಕಾಫಿನಾಡು’

ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆಯಂದೇ ಕರೆಯಲ್ಪಡುವ ಜಿಲ್ಲೆಯ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ದತ್ತಜಯಂತಿಯ ಸಂಭ್ರಮ ಮೇಳೈಸಿರುವುದರಿಂದ ಸಂಘ ಪರಿವಾರದ ಕಾರ್ಯಕರ್ತರು ಇಡೀ ನಗರವನ್ನು ಕೇಸರಿಮಯವಾಗಿಸಿದ್ದಾರೆ.

ಈಗಾಗಲೇ ದತ್ತ ಜಯಂತಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಡಿಸೆಂಬರ್ 19ರಂದೇ ಮಾಲೆ ಧರಿಸಿರೋ ದತ್ತಭಕ್ತರು ವೃತದಲ್ಲಿದ್ದಾರೆ. ಡಿಸೆಂಬರ್ 27 ಅನುಸೂಯ ಜಯಂತಿ, 28 ಸಾಂಕೇತಿಕ ಶೋಭಾಯಾತ್ರೆ ಹಾಗೂ 29 ರಂದು ದತ್ತಪೀಠದಲ್ಲಿ ದತ್ತಜಯಂತಿ ಹಾಗೂ ದತ್ತಪಾದುಕೆ ದರ್ಶನ ನಡೆಯಲಿದೆ. ಹಾಗಾಗಿ, ದತ್ತಾತ್ರೇಯನ ಭಕ್ತರು ಇಡೀ ಚಿಕ್ಕಮಗಳೂರು ನಗರವನ್ನು ಕೇಸರಿಮಯವಾಗಿಸಿದ್ದಾರೆ. ಮಧ್ಯರಾತ್ರಿವರೆಗೂ ನಗರದ ಪ್ರಮುಖ ಬೀದಿಗಳಲ್ಲಿ ಕೇಸರಿ ಬ್ಯಾನರ್, ಬಂಟಿಗ್ಸ್ ಕಟ್ಟಿ ನಗರವನ್ನು ಸುಂದರವಾಗಿಸಿದ್ದಾರೆ.

ನಗರದ ಹನುಮಂತಪ್ಪ ವೃತ್ತ, ಎನ್.ಎಂ.ಸಿ. ವೃತ್ತ, ಬೋಳರಾಮೇಶ್ವರ ಸರ್ಕಲ್, ಟೌನ್ ಕ್ಯಾಂಟೀನ್ ಸರ್ಕಲ್, ಎ.ಐ.ಟಿ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳನ್ನು ಕೇಸರಿಮಯ ವಾಗಿಸಿದ್ದಾರೆ. ಡಿ.27ರಂದು ಅನುಸೂಯ ಪೂಜೆ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ಮಹಿಳೆಯರಿಂದ ನಗರದ ಬೋಳರಾಮೇಶ್ವರ ದೇವಸ್ಥಾನದಿಂದ ಕಾಮಧೇನು ಗಣಪತಿ ದೇವಸ್ಥಾನದವರೆಗೆ ಸಂಕೀರ್ತನಾ ಯಾತ್ರೆ ನಡೆಯಲಿದೆ. ಈ ಸಂಕೀರ್ತನಾ ಯಾತ್ರೆಯಲ್ಲಿ ಜಿಲ್ಲೆಯ ಪ್ರಸಿದ್ಧ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾಹಿತಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸೆಲಬ್ರಿಟಿಗಳು ಭಾಗವಹಿಸಲಿದ್ದಾರೆ.

ಡಿ.28ರಂದು ಮಧ್ಯಾಹ್ನ 2ಗಂಟೆಗೆ ನಗರದ ರತ್ನಗಿರಿ ರಸ್ತೆಯಲ್ಲಿರುವ ಕಾಮಧೇನು ಗಣಪತಿ ದೇವಸ್ಥಾನದಿಂದ ಸಂಕೀರ್ತನಾ ಯಾತ್ರೆ ಆರಂಭಗೊಂಡು ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಆಜಾದ್‍ಪಾರ್ಕ್ ವೃತ್ತದಲ್ಲಿ ಮಹಾ ಆರತಿಯ ಕಾರ್ಯಕ್ರಮ ಮೂಲಕ ಕೊನೆಗೊಳ್ಳಲಿದೆ. ಡಿ.29ರಂದು ದತ್ತಭಕ್ತರು ಹಾಗೂ ಮಾಲಾಧಾರಿಗಳು ಹೊನ್ನಮ್ಮನಹಳ್ಳದಲ್ಲಿ ಸ್ನಾನ ಮಾಡಿ ಕಾಲ್ನಡಿಗೆಯಲ್ಲಿ ಭಜನೆಯೊಂದಿಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಬಳಿಕ ದತ್ತಪೀಠದಲ್ಲಿ ಗಣಪತಿ ಹೋಮ, ದತ್ತಹೋಮ, ಧನ್ವಂತರಿ ಹೋಮ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಘಟನೆಯ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಲಿ ಪ್ರಸನ್ನ್ ಕುಮಾರ್ ಆಗ್ರಹ’

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟಕದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಒಂದು ಲೋಡ್ ಸ್ಪೋಟಕ ವಸ್ತುಗಳು ನಗರಕ್ಕೆ ಬಂದಿದ್ದು ಹೇಗೆ. ನಗರಕ್ಕೆ ಬರುವ...

ಉಸಿರು ಕಟ್ಟಿಸುವ ವಾತಾವರಣವೇ ಪಕ್ಷ ಬಿಡಲು ಕಾರಣ: ರಾಜಣ್ಣ ಕೊರವಿ

ಹುಬ್ಬಳ್ಳಿ: ಜೆಡಿಎಸ್ ಪಕ್ಷದಲ್ಲಿನ ಉಸಿರು ‌ಕಟ್ಟಿಸಿವ ವಾತಾವರಣದಿಂದ ಬೆಸತ್ತು ನಾನು ಹಾಗೂ ನನ್ನ ಬೆಂಬಲಿಗರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಉದ್ದವ್ ಠಾಕ್ರೆ ವಿರುದ್ಧ ಸಿಡಿದೆದ್ದ ಕರವೇ‌ ಕಾರ್ಯಕರ್ತರು’

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಸೇನಾ ವಿರುದ್ದ ಸಿಡಿದೆದ್ದ ಕರವೇ ಯುವಸೇನಾ ಕಾರ್ಯಕರ್ತರು ಕರವೇ...

‘ಮೃತ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ’

ಶಿವಮೊಗ್ಗ: ಕಲ್ಲು ಕ್ವಾರಿ ದುರಂತಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧಿಗ್ಬ್ರಮೆಗೊಂಡಿದ್ದಾರೆ. ಸ್ಪೋಟದಿಂದ ಜೀವ ಹಾನಿಯಾಗಿರೋದು ನೋವಿನ ಸಂಗತಿ. ಇಂತಹದೊಂದು ದುರಾದೃಷ್ಟಕರ ಘಟನೆ ನೆಡೆಯಬಾರದಿತ್ತು. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ...

Recent Comments