Home ರಾಜ್ಯ ಮೋದಿ ವಿರುದ್ಧ ಫೇಸ್ ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ - ದೀಪಕ್ ಸಿಂಗ್ ಬಂಧನಕ್ಕೆ ಒತ್ತಾಯ!

ಮೋದಿ ವಿರುದ್ಧ ಫೇಸ್ ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ – ದೀಪಕ್ ಸಿಂಗ್ ಬಂಧನಕ್ಕೆ ಒತ್ತಾಯ!

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿಯಾಗಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಬಂಧಿಸಬೇಕಂದು ಆಗ್ರಹಿಸಿ ಇಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಇಂದು ಎಸ್.ಪಿ. ಕಚೇರಿಗೆ ತೆರಳಿ ಈ ಸಂಬಂಧ ದೂರು ಸಲ್ಲಿಸಿ, ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಬದುಕಿನ ವಿರುದ್ಧ ಅಸಂವಿಧಾನಿಕವಾಗಿ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವುದನ್ನು ಖಂಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ಎಂಬಾತ ಈ ಹಿಂದೆಯೂ ಹಲವಾರು ಬಿಜೆಪಿ ನಾಯಕರುಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ, ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಾ ಅವಮಾನ ಮಾಡುತ್ತಿದ್ದಾರೆ. ಅದರಂತೆ, 2020 ರ ಏಪ್ರಿಲ್ 7 ರಂದು ಕೂಡ ತಮ್ಮ ಫೇಸ್ ಬುಕ್ ಖಾತೆಯಲ್ಲಿ ನರೇಂದ್ರ ಮೋದಿ ಒಬ್ಬ ಪುಕ್ಕಲ ಎಂದು ಬರಹ ಪೋಸ್ಟ್ ಮಾಡಿದ್ದು, ನರೇಂದ್ರ ಮೋದಿ ಇಸ್ ಎ ಕಾವರ್ಡ್ ಎಂದು ಬರೆದುಕೊಂಡಿದ್ದರು. ಅಲ್ಲದೇ, ಇದೀಗ ಪ್ರಧಾನಿ ನರೇಂದ್ರ ಮೋದಿ ಕ್ಯಾಮೆರಾ ಹಿಡಿದು ನೀಡಿರುವ ಫೋಸ್ ಗೆ ಅಸಂವಿಧಾನಿಕ ಪದವನ್ನು ಬಳಸಿ ಪೋಸ್ಟ್ ಮಾಡಿದ್ದಾರೆ.

ಈ ರೀತಿ ಪ್ರಧಾನಿಯವರಿಗೆ ಅವಮಾನ ಮಾಡುವ ಒಂದೇ ಉದ್ಧೇಶದಿಂದ ಪೋಸ್ಟ್ ಹಾಕಿದ್ದು, ಇಂತಹ ಪೋಸ್ಟ್ ನಿಂದ, ಸಮಾಜದಲ್ಲಿ, ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿ ಕದಡುವ ಸಂಭವ ಇರುತ್ತದೆ. ಈ ಕೂಡಲೇ ದೀಪಕ್ ಸಿಂಗ್ ವಿರುದ್ಧ ಸುಮೋಟೋ ಕೇಸು ದಾಖಲಿಸಬೇಕು. ಮತ್ತು ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. ಈ ಹಿಂದೆಯೂ ಈ ವ್ಯಕ್ತಿ ವಿರುದ್ಧ ದೂರು ದಾಖಲಿಸಲಾಗಿದ್ದು, ಈ ಕೂಡಲೇ ಇವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅವರ ಬಳಿ ಹಣ ಕೇಳಿದ್ದು ತಪ್ಪು-ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ

ಚಿಕ್ಕಮಗಳೂರು : ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಬಹಳ ಪ್ರಾಮಾಣಿಕ ವ್ಯಕ್ತಿ, ನಿಷ್ಠೆ ಯಿಂದ ಕೆಲಸ ಮಾಡ್ತಾ ಇದ್ದಾರೆ, ಅವರ ಬಳಿ ಕಂದಾಯ ಸಚಿವ ಆರ್.ಅಶೋಕ್ ಪಿಎ ಗಂಗಾಧರ್ ಹಣ ಕೇಳಿದ್ದು ತಪ್ಪು,...

ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!

ವಿಜಯಪುರ : ಹೈದ್ರಾಬಾದ್ ಮಾರ್ಗದಲ್ಲಿ ಪ್ರಯಾಣಿಸುವ ಬಸ್​ನಲ್ಲಿ ಸಿಕ್ಕ ಗೋಲ್ಡ್​ ಚೈನ್​ನ್ನು ವಾರಸುದಾರರಿಗೆ ಹಿಂತಿರುಗಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ನಗರ ಕೆಎಸ್​ಆರ್​ಟಿಸಿ ಘಟಕದ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ತಮ್ಮ ಪ್ರಾಮಾಣಿಕತೆ ತೋರಿದ್ದಾರೆ....

ಕೆಂಪುಕೋಟೆ ಹತ್ತಿದವರು ಯಾರು ರೈತರಲ್ಲ : ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು : ನಿನ್ನೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ನೇತೃತ್ವವನ್ನ ರೈತರು ವಹಿಸಿಲ್ಲ, ಕೆಂಪು ಕೋಟೆ ಹತ್ತಿದವರು ಯಾರೂ ಕೂಡ ರೈತರಲ್ಲ, ಹೋರಾಟದ ನೇತೃತ್ವವನ್ನ ಉಮ್ಮರ್ ಖಾಲಿದ್ ಬಿಡುಗಡೆ ಮಾಡಿ ಅನ್ನುವಂತಹ ವಿಚಾರವಾದಿಗಳು ಹಾಗೂ...

‘4 ವರ್ಷ ಸರೆಮನೆ ವಾಸ ಪೂರ್ಣಗೊಳಿಸಿದ ಶಶಿಕಲಾ’

ಬೆಂಗಳೂರು: ದಿ.ಜಯಲಲಿತಾ ಆಪ್ತೆ ಶಶಿಕಲಾ 4 ವರ್ಷ ಶಿಕ್ಷೆ ಅವಧಿ ಪೂರ್ಣಗೊಳಿಸಿ ಇಂದು ಬಿಡುಗಡೆಯಾಗುತ್ತಿದ್ದಾರೆ.  ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಶಶಿಕಲಾ ಜೈಲು ಸೇರಿದ್ದರು. ಜೈಲಾಧಿಕಾರಿಗಳು ಆಸ್ಪತ್ರೆಗೆ ಬಂದು ಬಿಡುಗಡೆ ಪ್ರಕ್ರಿಯೆ ಮುಗಿಸಿ, ಶಶಿಕಲಾಯಿಂದ...

Recent Comments