Home ರಾಜ್ಯ ಡಿಕೆಶಿ ಗುಣಮುಖರಾಗಲೆಂದು 101 ಇಡ್ಗಾಯಿ ಹೊಡೆದ ಕೈ ಮುಖಂಡರು!

ಡಿಕೆಶಿ ಗುಣಮುಖರಾಗಲೆಂದು 101 ಇಡ್ಗಾಯಿ ಹೊಡೆದ ಕೈ ಮುಖಂಡರು!

ಚಿಕ್ಕಬಳ್ಳಾಪುರ: ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಗರದ ಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ಜಮಾಯಿಸಿದ ಕಾಂಗ್ರೆಸ್ ಡಿ.ಕೆ. ಶಿವಕುಮಾರ್ ಮತ್ತವರ ಕುಟುಂಬದವರ ಹೆಸರಲ್ಲಿ ಅಭಿಷೇಕ, ಅರ್ಚನೆ ನಡೆಸಿದ ಕೈ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಶೀಘ್ರವಾಗಿ ಗುಣಮುಖರಾಗಲೆಂದು ನೂರೊಂದು ಇಡ್ಗಾಯಿ ಒಡೆದರು.

ಈ ವೇಳೆ ಕೆಪಿಸಿಸಿ‌ ಸದಸ್ಯ ಎಸ್.ಪಿ.ಶ್ರೀನಿವಾಸ್, ಕಾಂಗ್ರೆಸ್ ಮುಖಂಡ ಯಲುವಹಳ್ಳಿ ರಮೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ಮತ್ತಿತರು ಭಾಗಿಯಾಗಿದ್ದರು.

-ಮಲ್ಲಪ್ಪ. ಎಂ.ಶ್ರೀರಾಮ್

LEAVE A REPLY

Please enter your comment!
Please enter your name here

- Advertisment -

Most Popular

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...

Recent Comments