ಇಂದೂ ರಿಲೀಸ್ ಆಗಲ್ಲ ‘ಕೈ’ ಅಭ್ಯರ್ಥಿಗಳ ಪಟ್ಟಿ..!

0
112

ಬೆಂಗಳೂರು: ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇಂದು ನಡೆಯಬೇಕಿದ್ದ ಕಾಂಗ್ರೆಸ್​ ಉನ್ನತಮಟ್ಟದ ಸಭೆಯನ್ನು ಮುಂದೂಡಲಾಗಿದೆ. ಮಾರ್ಚ್​ 19ಕ್ಕೆ ಸಭೆ ಮುಂದೂಡಲಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್‌ ಅವರ ದೆಹಲಿ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಸೀಟು ಹಂಚಿಕೆ ದೋಸ್ತಿಗೆ ತಲೆನೋವಾಗಿದ್ದು, ಈಗಾಗಲೇ ಕಾಂಗ್ರೆಸ್​ ಜಿಲ್ಲಾ ನಾಯಕರು ಪಕ್ಷದ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿರುವುದು ಜಿಲ್ಲಾ ಕಾಂಗ್ರೆಸ್​ ನಾಯಕರು ಇದನ್ನು ವಿರೋಧಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರಿಗೂ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಈ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರು ಅಸಮಧಾನ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಸುಮಲತಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಬೇಕೆಂಬ ನಾಯಕರ ಒತ್ತಾಯವೂ ಯಾವುದೇ ಫಲ ನೀಡಿಲ್ಲ. ಸೀಟು ಹಂಚಿಕೆ ವಿಚಾರ ದೋಸ್ತಿಗೆ ಕಗ್ಗಂಟಾಗಿದೆ. ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲು ಸಾಕಷ್ಟು ಸವಾಲುಗಳಿದ್ದು ‘ಕೈ’ ಅಭ್ಯರ್ಥಿಗಳ ಪಟ್ಟಿ ಇಂದೂ ಬಿಡುಗಡೆಯಾಗುವುದಿಲ್ಲ.

LEAVE A REPLY

Please enter your comment!
Please enter your name here