Home uncategorized ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಹುಬ್ಬಳ್ಳಿ : ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಭೂಸುಧಾರಣಾ ಕಾಯಿದೆ ತಿದ್ದುಪಡಿ ಖಂಡಿಸಿ ಹಾಗೂ ಕೊರೋನಾ ನಿಯಂತ್ರಣ ಹೆಸರಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿದರು.

ನಗರದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊರೋನಾ ವೈರಸ್ ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ವ್ಯಾಪಕವಾದ ಭ್ರಷ್ಟಾಚಾರ ನಡೆಸಿದ್ದು,ಈ ಕುರಿತು ಉಚ್ಚನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಇನ್ನೂ ಸರ್ಕಾರ ಜಾರಿಗೊಳಿಸಿದ ಕಾಯಿದೆಯಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ಭೂಮಿ ಕಳೆದುಕೊಳ್ಳಲಿದ್ದಾರೆ. ಭೂ ದಲ್ಲಾಳಿಗಳು ಹಾಗೂ ರೀಯಲ್ ಎಸ್ಟೇಟ್ ಉದ್ಯಮಿಗಳು ರೈತರಿಗೆ ಹಣದ ಆಮಿಷ ತೋರಿಸಿ ರೈತರ ಭೂಮಿಯನ್ನು ಕಬಳಿಸಲಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ರಾಜ್ಯ ಸರ್ಕಾರ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

- Advertisment -

Most Popular

 ‘ಶಿವಮೊಗ್ಗದಲ್ಲಿ ಜಿಲೆಟಿನ್ ತುಂಬಿದ ಲಾರಿ ಸ್ಪೋಟ್ 8 ಮಂದಿ ದುರ್ಮರಣ’

ಶಿವಮೊಗ್ಗ: ಶಿವಮೊಗ್ಗದ ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟಗೊಂಡು ಸ್ಥಳದಲ್ಲಿ 8 ಮಂದಿ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಹುಣಸೋಡು ಬಳಿ ಪ್ರದೇಶದ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಕಾರ್ಮಿಕರು...

‘ಸೈಲೆಂಟ್ ಶಾಸಕ ಅರವಿಂದ ಬೆಲ್ಲದ’

ಹುಬ್ಬಳ್ಳಿ: ನಾನು ರಾಜಕೀಯವಾಗಿ ಏನನ್ನು ಮಾತನಾಡುವುದಿಲ್ಲ.ಅಲ್ಲದೇ ನಾನು ದೆಹಲಿಗೆ ಹೋಗಿನೂ ಇಲ್ಲ ನಾನು ಏನನ್ನು ಮಾತನಾಡುವುದಿಲ್ಲ ಎಂದು  ಶಾಸಕ ಅರವಿಂದ ಬೆಲ್ಲದ ಸಚಿವ ಸಂಪುಟದಲ್ಲಿ ಸ್ಥಾನ ನೀಡದೇ ಇರುವ ಕುರಿತು ಪರೋಕ್ಷವಾಗಿ ಅಸಮಾಧಾನ...

‘ವರದಕ್ಷಿಣೆ ಕಿರುಕುಳ ಮಹಿಳೆ ಆತ್ಮಹತ್ಯೆ’

ಶಿವಮೊಗ್ಗ: ಪತಿ ಹಾಗೂ ಪತಿಯ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಸವಿತಾ (31) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದು, ನಗರದ ನ್ಯೂ ಮಂಡ್ಲಿ...

‘ವಿದ್ಯಾರ್ಥಿನಿಯರ ಹಾಸ್ಟೆಲ್ ಸೌಲಭ್ಯಕ್ಕೆ ಎನ್.ಎಸ್.ಯು.ಐ. ಆಗ್ರಹ’

ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು, ಪ್ರತಿಭಟನೆ ನಡೆಸಿದ್ದಾರೆ.  ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು,...

Recent Comments