Home ರಾಜ್ಯ ಮೈಸೂರು ಸೇತುವೆ ಕಾಮಗಾರಿಗಾಗಿ ಮರಗಳ ಮಾರಣಹೋಮ..!

ಸೇತುವೆ ಕಾಮಗಾರಿಗಾಗಿ ಮರಗಳ ಮಾರಣಹೋಮ..!

ಮೈಸೂರು: ನಂಜನಗೂಡಿನಲ್ಲಿ ಸೇತುವೆ ಕಾಮಗಾರಿ ನಡೆಸುತ್ತಿದ್ದ ವೇಳೆ ಭಾರಿ ಗಾತ್ರದ ಮರಗಳನ್ನು ಹೊಡೆದುರುಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಬೆಳಕಿಗೆ ಬಂದಿದ್ದು ಗುತ್ತಿಗೆದಾರನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಹಲವು ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ.

ನಂಜನಗೂಡು ಶ್ರೀಕಂಠೇಶ್ವರನ ದೇವಾಲಯದ ಸಮೀಪ ಹರಿಯುವ ಗುಂಡ್ಲಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಸೇತುವೆ ಬಳಿ ಬೆಳೆದಿದ್ದ ಭಾರಿ ಮರಗಳನ್ನ ಉರುಳಿಸಲಾಗಿದೆ. ಮರಗಳನ್ನ ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ. ಕಡಿದ ಮರಗಳನ್ನ ಮಾರಾಟ ಮಾಡಿದ್ದಾರೆಂದು ದೂರಿದ್ದಾರೆ. ನಂಜನಗೂಡು-ಚಾಮರಾಜನಗರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 52 ಕೋಟಿ ರೂಪಾಯಿ ಪ್ಯಾಕೇಜ್ ನೀಡಲಾಗಿದೆ. ಈ ಪೈಕಿ ಸೇತುವೆ ನಿರ್ಮಾಣಕ್ಕೆ 10 ಕೋಟಿ ಟೆಂಡರ್ ನೀಡಲಾಗಿದೆ. ಆಂಧ್ರ ಮೂಲದ ವ್ಯಕ್ತಿಗೆ ಟೆಂಡರ್ ನೀಡಲಾಗಿದ್ದು, ಸೇತುವೆ ಕಾಮಗಾರಿಗೆ ಅಡ್ಡಿಯಾಗದ ಮರಗಳನ್ನೂ ಸಹ ಕಡಿದು ಉರುಳಿಸಲಾಗಿದೆ. ಸ್ಥಳೀಯರ ವಿರೋಧದ ನಡುವೆಯೂ ಮರಗಳನ್ನ ಕಡಿದು ಹಾಕಿರುವ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments