Home uncategorized ಕೊರೊನಾ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಇಲ್ಲ ಬೆಡ್

ಕೊರೊನಾ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಇಲ್ಲ ಬೆಡ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು ಸೋಂಕಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. ರಾಜ್ಯ ರಾಜಧಾನಿಯಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ​ ಆಸ್ಪತ್ರೆಯಲ್ಲಿ ಹಾಸಿಗೆಗಳು ಫುಲ್ ಆಗಿವೆ. ಕಳೆದ 4 ರಿಂದ 5 ದಿನದಲ್ಲಿ ಬೆಂಗಳೂರಿನಲ್ಲಿ ಅಧಿಕ ಕೇಸ್​ಗಳು ಪತ್ತೆಯಾಗುತ್ತಿದೆ. ಹಲವು ಕೊರೊನಾ ರೋಗಿಗಳಿಗೆ ಬೆಡ್​ ಸಿಗುತ್ತಿಲ್ಲ . ಬೆಂಗಳೂರಿನ ರಾಜೀವ್​ ಗಾಂಧಿ, ಬೋರಿಂಗ್, ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಐಸಿಯು ಬೆಡ್​ಗಳು ಖಾಲಿಯಾಗಿವೆ ಎನ್ನಲಾಗುತ್ತಿದೆ. ಚಿಕ್ಕಪೇಟೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಹಾಗಾಗಿ ಮಾರುಕಟ್ಟೆಯನ್ನು ಸ್ವಯಂ ಪ್ರೇರಿತವಾಗಿ ಬಂದ್​ ಮಾಡಲು ವಿವಿಧ ಸಂಘಟನೆಗಳು ನಿರ್ಧರಿಸಿವೆ. ಚಿಕ್ಕ ಪೇಟೆಯಲ್ಲಿ ಅಧಿಕ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು ಇದರ ಬಗ್ಗೆ ಬಿಬಿಎಂಪಿ ಗಮನಕ್ಕೂ ತರಲಾಗಿದ್ದು ಅಧಿಕಾರಿಗಳು ಬೆಡ್​ ಇಲ್ಲ ಅಂತಿದ್ದಾರೆ. ಹೀಗಾಗಿ ಪಾಸಿಟಿವ್ ಬಂದವರು ಮನೆಯಲ್ಲೇ ಇದ್ದಾರೆ ಎಂದು ಚಿಕ್ಕಪೇಟೆ ಕಾರ್ಪೋರೇಟರ್ ಶಿವಕುಮಾರ್ ಪವರ್ ಟಿವಿಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಕೋವಿಡ್​19 ಪ್ರಕರಣ 1200ರ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ ಸ್ಥಿತಿ ಬೆಂಗಳೂರಿಗೂ ಎದುರಾಗುತ್ತಾ ಅನ್ನೋ ಅನುಮಾನ ಮೂಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಡಿ. ಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ ಮಾಡಿದ ದಿನೇಶ್ ಗುಂಡೂರಾವ್

ಬೆಂಗಳೂರು :  ಡಿ. ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಿ. ಕೆ ಶಿವಕುಮಾರ್ ತಾಯಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಹಾಗೆಯೇ...

ಕೊಲೆ ಆರೋಪಿಗೆ ಕೊರೋನಾ ದೃಢ | ಇನ್ಸ್ ಪೆಕ್ಟರ್ ಸೇರಿ 15 ಪೊಲೀಸರಿಗೆ ಕ್ವಾರಂಟೈನ್

ಹುಬ್ಬಳ್ಳಿ : ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಂಡಿವಾಡ ಕ್ರಾಸ್ ಬಳಿ ಪತ್ನಿ ಶಾರವ್ವ ಎಂಬಾಕೆಯನ್ನು ಕೊಲೆ ಮಾಡಿದ್ದ....

ಡಿಕೆಶಿವಕುಮಾರ್ ಗೆ ಇಂದು ಪಟ್ಟಾಭಿಷೇಕ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ  ಡಿ.ಕೆ ಶಿವಕುಮಾರ್ ಇಂದು ಪ್ರತಿಜ್ಞೆ ಮಾಡಲಿದ್ದಾರೆ. ಡಿಕೆಶಿ ಪದಗ್ರಹಣಕ್ಕೆ ಎರಡು ಬಾರಿ ಡೇಟ್ ಫಿಕ್ಸ್​ ಆಗಿ ಕ್ಯಾನ್ಸಲ್ ಆಗಿತ್ತು.  ಇಂದು ಅಂತಿಮವಾಗಿ ಕೆಪಿಸಿಸಿ ಕಚೇರಿಯಲ್ಲಿ 11 ಗಂಟೆಗೆ...

ಕಾಡಾನೆಗಳನ್ನು ಸ್ಥಳಾಂತರಿಸಿ ರೈತರ ಬೆಳೆ ಹಾನಿಗೆ ಪರಿಹಾರ ನೀಡಿ: ಜೆಡಿಎಸ್ ರಾಜ್ಯಾಧ್ಯಕ್ಷ

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಯಿಂದ ಅಪಾರ ಜೀವ ಹಾನಿ ಹಾಗೂ ಬೆಳೆ ನಾಶವಾಗುತ್ತಿರುವ ಹಿನ್ನಲೆಯಲ್ಲಿ ಅವುಗಳನ್ನು ಸ್ಥಳಾಂತರಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಲೂರು ಹಾಗೂ ಸಕಲೇಶಪುರ ಕ್ಷೇತ್ರದ...