ಬೆಂಗಳೂರು: ದೇಶಾದ್ಯಂತ ಭಯ ಹುಟ್ಟಿಸಿರುವ ಕೊರೋನಾ ಭಾರತಕ್ಕೆ ಕಾಲಿಟ್ಟು ಆತಂಕ ಸೃಷ್ಟಿಸಿದೆ. ಇದೀಗ ಕೊರೋನಾ ವೈರಸ್ ಬೆಂಗಳೂರಿಗೂ ಲಗ್ಗೆ ಇಟ್ಟಿದ್ದು, ಈವರೆಗೆ ಒಟ್ಟು ನಾಲ್ವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅಮೆರಿಕಾದಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಇರುವುದು ಗೊತ್ತಾಗಿದೆ. ಇಂದು ಇನ್ನೂ ಮೂವರಲ್ಲಿ ಕೊರೋನಾ ಇರುವುದು ತಿಳಿದುಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು ಕರ್ನಾಟಕದಲ್ಲಿ ಒಟ್ಟು ನಾಲ್ಕು ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ನಿನ್ನೆ ಕೊರೋನಾ ಪತ್ತೆಯಾಗಿದ್ದ, ಅಮೆರಿಕಾದಿಂದ ಬಂದ ಸಾಫ್ಟ್ವೇರ್ ಇಂಜಿನಿಯರ್ ಅವರ ಕುಟುಂಬದವರು ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ.
ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ #CoronavirusOutbreak
— B Sriramulu (@sriramulubjp) March 10, 2020